ಡಿಕೆಶಿ ಅರ್ಜಿ ವಿಚಾರಣೆ ಮಾರ್ಚ್​ 7ಕ್ಕೆ ಮೂಂದೂಡಿಕೆ

0
160

ಬೆಂಗಳೂರು: ಡಿ. ಕೆ ಶಿವಕುಮಾರ್​ ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಮಾರ್ಚ್​ 7ಕ್ಕೆ ಮುಂದೂಡಲಾಗಿದೆ. ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದ ವಿಚಾರಣೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ರಾಜ್ಯ ಜಲಸಂಪನ್ಮೂಲ ಸಚಿವ ಡಿ. ಕೆ ಶಿವಕುಮಾರ್​ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು. ಇಂದು ನ್ಯಾ. ಅರವಿಂದ್ ಕುಮಾರ್ ನೇತೃತ್ವದಲ್ಲಿ ಏಕ ಸದಸ್ಯ ಪೀಠ ಶಿವಕುಮಾರ್ ವಿಚಾರಣೆ ನಡೆಸಬೇಕಿತ್ತು. ಆದರೆ ಈಗ ವಿಚಾರಣೆಯನ್ನು ಮುಂದೂಡಲಾಗಿದೆ.

ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣವರ್ಗಾವಣೆ ಆರೋಪವಿದ್ದು ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿತ್ತು. ಆದ್ರೆ ಬಜೆಟ್ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ಶಿವಕುಮಾರ್ ಅವರು ಕಾಲಾವಕಾಶ ಕೋರಿದ್ದರು. ಹೀಗಾಗಿ ಫೆ.22ಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು.

LEAVE A REPLY

Please enter your comment!
Please enter your name here