Home ದೇಶ-ವಿದೇಶ ಕರ್ನಾಟಕ ಕೊರೋನಾ ಬಗ್ಗೆ ಸುಪ್ರೀಂ ಸ್ವಯಂ ಪ್ರೇರಿತ ವಿಚಾರಣೆ..!

ಕರ್ನಾಟಕ ಕೊರೋನಾ ಬಗ್ಗೆ ಸುಪ್ರೀಂ ಸ್ವಯಂ ಪ್ರೇರಿತ ವಿಚಾರಣೆ..!

ಬೆಂಗಳೂರು: ಆಕ್ಸಿಜನ್‌ ಪೂರೈಕೆ ಮತ್ತು ಕೋವಿಡ್‌ ಪರಿಸ್ಥಿತಿ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸುಪ್ರೀಂಕೋರ್ಟ್‌ ಸ್ವಯಂ ಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ, ನ್ಯಾ.ನಾಗೇಶ್ವರ ರಾವ್, ನ್ಯಾ.ರವೀಂದ್ರ ಭಟ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದಕ್ಕೆ ಸಂಬಂಧ ಪಟ್ಟಂತೆ ಕೋರ್ಟ್‌ಗೆ ಮಾಹಿತಿ ಮತ್ತು ನೆರವು ನೀಡುವ ಸಲುವಾಗಿ ಹಿರಿಯ ವಕೀಲ ಹರೀಶ್‌ ಸಾಳ್ವೆಯವರನ್ನು ಅಮಿಕಸ್‌ ಕ್ಯೂರಿಯಾಗಿ ನಿನ್ನೆ ನೇಮಿಸಲಾಗಿತ್ತು. ಆದ್ರೆ, ಇವರ ನೇಮಕದ ಬಗ್ಗೆ ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಕೆಲವು ಹಿರಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ ತಾನು ಅಮಿಕಸ್‌ ಕ್ಯೂರಿಯಾಗಿ ಮುಂದುವರೆಯಲು ಬಯಸುವುದಿಲ್ಲ ಎಂದು ಹರೀಶ್‌ ಸಾಳ್ವೆ ಹಿಂದೆ ಸರಿದಿದ್ದಾರೆ.

ತಮಿಳುನಾಡಿನ ವೇದಾಂತ ಸ್ಟೀಲ್‌ ಕಂಪನಿಯನ್ನು ಅಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿ 2018ರಲ್ಲಿ ಮುಚ್ಚಿಸಿದೆ. ಈ ಕಂಪನಿ ಪರವಾಗಿ ಹರೀಶ್‌ ಸಾಳ್ವೆ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾರೆ. ಹೀಗಾಗಿ ಕೋವಿಡ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಅಮಿಕಸ್‌ ಕ್ಯೂರಿಯಾಗಿ ಹರೀಶ್‌ ಕೆಲಸ ನಿರ್ವಹಿಸುವುದು ಸೂಕ್ತವಲ್ಲ, ಇದರಲ್ಲಿ ವೈಯಕ್ತಿಕ ಹಿತಾಸಕ್ತಿ ಅಡ್ಡಿಯಾಗಬಹುದು ಎಂದು ಕೆಲವು ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಹಾಗಾಗಿ ತಾನು ಅಮಿಕಸ್‌ ಕ್ಯೂರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಹರೀಶ್‌ ಸಾಳ್ವೆ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ...

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

Recent Comments