ನವದೆಹಲಿ : ಕೊರೋನಾ ಹಿನ್ನೆಲೆಯಲ್ಲಿ ಡೌನ್ ಸಮಯದಲ್ಲಿ ಕಾರ್ಮಿಕರಿಗೆ ವೇತನವನ್ನು ನೀಡದ ಕಂಪೆನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಲಾಕ್ ಡೌನ್ ಅವಧಿಯಲ್ಲಿ ಕೇಂದ್ರ ಸರಕಾರ ಕಂಪೆನಿ ಕೆಲಸಗಾರರಿಗೆ ಕಡ್ಡಾಯವಾಗಿ ಸಂಪೂರ್ಣ ವೇತನ ನೀಡಬೇಕೆಂದು ಮಾರ್ಚ್ 29 ರಂದು ಹೊರಡಿಸಿದ್ದ ಆದೇಶದ ಕುರಿತಾಗಿ ವಿವರಣೆ ನೀಡಲು ನಾಲ್ಕು ವಾರಗಳ ಕಾಲಾವಕಾಶ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರಕಾರ ಕಂಪೆನಿಗಳ ವಿರುದ್ಧ ಜುಲೈ ತಿಂಗಳ ಅಂತ್ಯದವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಆದೇಶಿಸಿ ತೀರ್ಪು ನೀಡಿದ್ದು ಇದರಿಂದ ಕಂಪೆನಿಯ ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ.
ಕೇಂದ್ರ ಸರಕಾರದ ಆದೇಶದ ವಿರುದ್ಧ ಸಣ್ಣ ಕೈಗಾರಿಕೆಗಳ ಸಂಘಟಕರು ನ್ಯಾಯಾಲಯದ ಮೆಟ್ಟಿಲೇರಿದ್ದರು ಇದಕ್ಕೆ ಪ್ರತಿಯಾಗಿ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.