Sunday, May 29, 2022
Powertv Logo
Homeರಾಜ್ಯಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್ 29 ರಿವಿಷನ್ ಪ್ರಾರಂಭ : ಎಸ್. ಸುರೇಶ್ ಕುಮಾರ್

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್ 29 ರಿವಿಷನ್ ಪ್ರಾರಂಭ : ಎಸ್. ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಹರಡುವ ಭೀತಿಗೆ ಲಾಕ್​ಡೌನ್ ಘೋಷಿಸಿದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.  ರಾಜ್ಯದಲ್ಲಿ ಲಾಕ್​ಡೌನ್ ಸಡಿಲಿಕೆಯಾಗಿದ್ರು, ಶಾಲೆ-ಕಾಲೇಜುಗಳು ಓಪನ್ ಆಗಿಲ್ಲ. ಎಸ್​ಎಸ್​ಎಲ್​ಸಿ ಪರೀಕ್ಷೆಯ ದಿನಾಂಕಗಳು ಈವರೆಗೂ ನಿಗದಿಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗಾಗಿ ಸರ್ಕಾರ ರಿವಿಷನ್ ಪ್ರಾರಂಭಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 29 ರಿಂದ ಚಂದನ ವಾಹಿನಿಯಲ್ಲಿ ವಿದ್ಯಾರ್ಥಿಗಳಿಗೆ ರಿವಿಷನ್ ಪ್ರಾರಂಭಿಸುತ್ತಿದ್ದು, ಮಧ್ಯಾಹ್ನ 3 ಗಂಟೆಯಿಂದ 4.30ವರೆಗೆ ತರಗತಿಗಳು ನಡೆಯುತ್ತಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ. ಜೊತೆಗೆ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

Recent Comments