Home ಸಿನಿ ಪವರ್ ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಆದೇಶ

ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಆದೇಶ

 ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ  ವಹಿಸುವಂತೆ ಸುಪ್ರೀಂಕೋರ್ಟ್ ಮುಂಬೈ ಪೊಲೀಸರಿಗೆ ಸೂಚನೆ ನೀಡಿದೆ.

ಸುಶಾಂತ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹೃಷಿಕೇಶ್ ನೇತೃತ್ವದ ಏಕ ಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಈ ಆದೇಶ ಹೊರಡಿಸಿದೆ.

ನಟಿ ರಿಯಾ ಚಕ್ರವರ್ತಿ  ವಿರುದ್ಧ ಸುಶಾಂತ್ ಸಿಂಗ್ ಅವರ ತಂದೆ ಬಿಹಾರದ ಪಾಟ್ನಾದಲ್ಲಿ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ರಿಯಾ ವಿರುದ್ಧ ಸೆಕ್ಷನ್ 306 ( ಆತ್ಮಹತ್ಯೆಗೆ ಪ್ರಚೋದನೆ ), 341 ( ತಪ್ಪಾದ ಸಂಯಮಕ್ಕಾಗಿ ಶಿಕ್ಷೆ ), 342 ( ತಪ್ಪಾದ ಬಂಧನಕ್ಕಾಗಿ ಶಿಕ್ಷೆ ), 380 (ವಾಸಿಸುವ ಮನೆಯಲ್ಲೇ ಕಳ್ಳತನ) , 406 ( ವಿಶ್ವಾಸಾರ್ಹ ಉಲ್ಲಂಘನೆ) ಹಾಗೂ 420 ( ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ ) ಮೊದಲಾದ ಐಪಿಸಿ ಸೆಕ್ಷನ್ ಅಡೊಯಲ್ಲಿ ದೂರು ದಾಖಲಾಗಿದೆ.

ಪಾಟ್ನಾದಲ್ಲಿ ದಾಖಲಾಗಿರುವ ಎಫ್​ ಐ ಆರ್ ಪ್ರಶ್ನಿಸಿ, ತನಿಖೆಯನ್ನು ಬಿಹಾರದಿಂದ ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮುಂಬೈಗೆ ಪ್ರಕರಣದ ವರ್ಗಾವಣೆ ಸಾಧ್ಯವಿಲ್ಲ ಎಂದು ಪಾಟ್ನಾ ಪೊಲೀಸರು ವಾದಿಸಿದ್ದರು.  ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ನೀಡುವಂತೆ ಸುಶಾಂತ್ ಸಿಂಗ್ ಪೋಷಕರು ಮನವಿ ಮಾಡಿದ್ದರು.

ಸದ್ಯ ಸುಪ್ರೀಂ ಮಹತ್ವದ ಆದೇಶ ಹೊರಡಿಸಿದ್ದು, ಸುಶಾಂತ್ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆದೇಶಿಸಿದೆ . ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ಸಾಕ್ಷಿಗಳು ಹಾಗೂ ದಾಖಲೆಗಳನ್ನು ಮುಂಬೈ ಪೊಲೀಸರು ಸಿಬಿಐಗೆ ಹಸ್ತಾಂತರಿಸುವಂತೆ ಸೂಚಿಸಿದೆ.

ಸುಪ್ರೀಂಕೋರ್ಟ್​ನ ಈ ಆದೇಶದಿಂದ ರಿಯಾ ಮತ್ತು ಇತರೆ ಆರೋಪಿಗಳಿಗೆ ಸಂಕಷ್ಟ ಹೆಚ್ಚಿದೆ.. ಸುಶಾಂತ್ ಪೋಷಕರಿಗೆ ಆರಂಭಿಕ ಗೆಲುವು ಸಿಕ್ಕಂತಾಗಿದೆ.

ಜೂನ್ 14 ರಂದು ಮುಂಬೈನ ತಮ್ಮ ಫ್ಲಾಟ್​ನಲ್ಲಿ ಸುಶಾಂತ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments