Home ಪವರ್ ಪಾಲಿಟಿಕ್ಸ್ ಸುಷ್ಮಾ ಸ್ವರಾಜ್ ವಿದಾಯದ ಟ್ವೀಟ್​ನಲ್ಲಿ ಮೋದಿ ಬಗ್ಗೆ ಹೇಳಿದ್ದೇನು?

ಸುಷ್ಮಾ ಸ್ವರಾಜ್ ವಿದಾಯದ ಟ್ವೀಟ್​ನಲ್ಲಿ ಮೋದಿ ಬಗ್ಗೆ ಹೇಳಿದ್ದೇನು?

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಎರಡನೇ ಅವಧಿಯ ಸರ್ಕಾರವನ್ನು ರಚಿಸಿದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಹಾಗೂ 57 ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು.
ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್​ ಈ ಬಾರಿ ಸಂಪುಟದಿಂದ ದೂರ ಉಳಿದಿದ್ದಾರೆ. ಮೋದಿ ನೇತೃತ್ವದ ಮೊದಲ ಅವಧಿ ಸರ್ಕಾರದಲ್ಲಿ ವಿದೇಶಾಂಗ ಖಾತೆಯನ್ನು ನಿಭಾಯಿಸಿ ಅಪಾರ ಜನಮನ್ನಣೆ ಗಳಿಸಿದ್ದಾರೆ. ಅವರೀಗ ವಿದಾಯದ ಭಾವನಾತ್ಮಕ ಟ್ವೀಟ್ ಅನ್ನು ಮಾಡಿದ್ದಾರೆ.
‘ನಾನು ನಿಮ್ಗೆ ಕೃತಜ್ಞಳಾಗಿದ್ದೇನೆ. ಸರ್ಕಾರ ಅದ್ಭುತವಾಗಿ ಮುನ್ನಡೆಯಲಿ’ ಅಂತ ವಿಶ್ ಮಾಡಿರೋ ಸುಷ್ಮಾ ಸ್ವರಾಜ್, ಭಾರತೀಯ, ಅನಿವಾಸಿ ಭಾರತೀಯರಿಗೆ 5 ವರ್ಷಗಳ ಕಾಲ ಸೇವೆ ಸಲ್ಲಿಸೋಕೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಅವರು ವಿದೇಶದಲ್ಲಿರುವ ಭಾರತೀಯರ ಸಮಸ್ಯೆಗಳಿಗೆ, ಕಷ್ಟಗಳಿಗೆ ಸ್ಪಂದಿಸೋದಕ್ಕಂತ ಮೈಕ್ರೋ ಬ್ಲಾಗಿಂಗ್​ ಸೈಟ್​ ಅಳವಡಿಸಿಕೊಂಡಿದ್ದರು. ಈ ಮೂಲಕ ಅನಿವಾಸಿ ಭಾರತೀಯರ ಸಹಾಯಕ್ಕೆ ನಿಂತಿದನ್ನು ಈ ವೇಳೆ ಸ್ಮರಿಸಬಹುದು.
ಇನ್ನು ಯುಪಿಎ 10ವರ್ಷಗಳ ಅವಧಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕಿಯಾಗಿ ಸೇವೆ ಸಲ್ಲಿಸಿದ್ರು. ಗುರುವಾರ ನರೇಂದ್ರ ಮೋದಿ ನೂತನ ಸಂಪುಟದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments