Home ಕ್ರೀಡೆ 'ಕಾಫಿ ವಿತ್​​ ಕರಣ್' ಎಫೆಕ್ಟ್​: ಆಸೀಸ್​​ ಸರಣಿಯಿಂದ ರಾಹುಲ್​, ಪಾಂಡ್ಯಗೆ ಗೇಟ್​​ಪಾಸ್​?

‘ಕಾಫಿ ವಿತ್​​ ಕರಣ್’ ಎಫೆಕ್ಟ್​: ಆಸೀಸ್​​ ಸರಣಿಯಿಂದ ರಾಹುಲ್​, ಪಾಂಡ್ಯಗೆ ಗೇಟ್​​ಪಾಸ್​?

ಖಾಸಗಿ ಶೋ ಒಂದರಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಟೀಮ್​ಇಂಡಿಯಾ ಆಟಗಾರರಾದ ಕೆಎಲ್​ ರಾಹುಲ್​ ಹಾಗೂ ಹಾರ್ಧಿಕ್​ ಪಾಂಡ್ಯರಿಗೆ ಆಸ್ಟ್ರೇಲಿಯಾ ಸರಣಿಯಿಂದ ಗೇಟ್​​ ಪಾಸ್​​ ನೀಡಲಾಗಿದೆ. ಬಾಲಿವುಡ್​​ ನಿರ್ದೇಶಕ ಕರಣ್​ ಜೋಹರ್​ ನಡೆಸಿಕೊಡುವ ‘ಕಾಫಿ ವಿತ್​ ಕರಣ್’​ ಎಂಬ ಟಾಕ್​ ಶೋನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಈ ಆಟಗಾರರು ಸದ್ಯದಲ್ಲೇ ಕಾಂಗರೂ ನಾಡಿನಿಂದ ತವರಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಸಿಸಿಐನ ಆಡಳಿತ ವಿಭಾಗದ ಸಮಿತಿ ಸಲಹೆಯಂತೆ ಹಾರ್ದಿಕ್ ಪಾಂಡ್ಯ ಹಾಗೂ ಕೆ. ಎಲ್. ರಾಹುಲ್​ರನ್ನು ತನಿಖೆಗೆ ಒಳಪಡಿಸಲಿದ್ದು, ಆಸ್ಟ್ರೇಲಿಯಾ ಸರಣಿ ಮಾತ್ರವಲ್ಲದೇ ನ್ಯೂಜಿಲೆಂಡ್​ ವಿರುದ್ಧದ ಸರಣಿಯಲ್ಲಿಯೂ ಇವರು ಭಾಗವಹಿಸುವುದು ಅನುಮಾನ ಎನ್ನಲಾಗುತ್ತಿದೆ. ಪ್ರಕರಣದ ವಿಚಾರಣೆ ಮುಗಿಯುವವರೆಗೂ ಇಬ್ಬರು ಆಟಗಾರರು ಎಲ್ಲಾ ಮಾದರಿಯ ಕ್ರಿಕೆಟ್​​ನಿಂದ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.

ಇತ್ತಿಚೆಗೆ ಪ್ರಸಾರವಾದ ‘ಕಾಫಿ ವಿತ್​​ ಕರಣ್​’ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ಮಹಿಳೆಯರ ಕುರಿತು ಅಸಭ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ಟೀಕೆಗಳು ಕೇಳಿ ಬಂದಿದ್ದವು. ಪರಿಣಾಮವಾಗಿ ಎರಡೂ ಆಟಗಾರರಿಗೂ ಸ್ಪಷ್ಟನೆ ಕೇಳಿ ಬಿಸಿಸಿಐ ಶೋಕಾಸ್​​ ನೋಟಿಸ್​ ಜಾರಿ ಮಾಡಿತ್ತು. ಆದರೆ ಆಟಗಾರರ ಸ್ಪಷ್ಟನೆ ಬಿಸಿಸಿಐ ಅಧಿಕಾರಿಗಳಿಗೆ ಒಪ್ಪದ ಕಾರಣ ಅಮಾನತು ಶಿಕ್ಷೆಯನ್ನು ವಿಧಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments