Home ಸಿನಿ ಪವರ್ ಕಾಲಿವುಡ್ ಶಿವಮೊಗ್ಗ ಜೈಲಿಗೆ ತಮಿಳಿನ ಸೂಪರ್ ಸ್ಟಾರ್ ವಿಜಯ್!

ಶಿವಮೊಗ್ಗ ಜೈಲಿಗೆ ತಮಿಳಿನ ಸೂಪರ್ ಸ್ಟಾರ್ ವಿಜಯ್!

ಶಿವಮೊಗ್ಗ: ತಮಿಳಿನ ಸೂಪರ್ ಸ್ಟಾರ್ ವಿಜಯ್ ಸದ್ಯ ಬಿಗಿಲ್ ಚಿತ್ರದ ಸಕ್ಸಸ್ ಖುಷಿಯಲ್ಲಿದ್ದು, ವಿಜಯ್ ಅವರ ಮುಂದಿನ ಸಿನಿಮಾದ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಕ್ಯೂರಿಯಾಸಿಟಿ ಹುಟ್ಟಿದೆ.  ಅದರಂತೆ ಸೂಪರ್ ಸ್ಟಾರ್ ನಟ ವಿಜಯ್ ಶಿವಮೊಗ್ಗದ ಜೈಲಿಗೆ ಬರುತ್ತಿದ್ದಾರೆ.  ಇದೇನಪ್ಪಾ ವಿಜಯ್ ಅಂತಾ ತಪ್ಪೇನು ಅಂತಾ  ನೀವು ತಲೆ ಕೆಡಿಸ್ಕೋಬೇಡಿ. 

ಅಂದಹಾಗೆ, ಸೂಪರ್ ಸ್ಟಾರ್ ವಿಜಯ್, ಅವರ ಮುಂದಿನ ಸಿನಿಮಾ  ದಳಪತಿ-64 ಸಿನಿಮಾದ ಶೂಟಿಂಗ್​​ಗಾಗಿ ಶಿವಮೊಗ್ಗದ ಜೈಲಿಗೆ ಬರುತ್ತಿದ್ದಾರೆ.  ಅಂದಹಾಗೆ ಶಿವಮೊಗ್ಗದ ಜೈಲು ಕೊರಿಯನ್ ಮಾದರಿ ಜೈಲಾಗಿದ್ದು, ರಾಜ್ಯದಲ್ಲಿಯೇ ಇದೊಂದು ವಿಶೇಷ ಕಾರಾಗೃಹವಾಗಿದೆ.  ಹೀಗಾಗಿ, ಈ ಜೈಲಿನಲ್ಲಿ  ಸಿನಿಮಾ ಶೂಟಿಂಗ್​​ಗಳು ನಡೆಯುತ್ತಲೇ ಇರುತ್ತವೆ.

ವಿಲನ್ ಸಿನಿಮಾದಲ್ಲಿಯೂ ಶಿವರಾಜ್ ಕುಮಾರ್ ಫೈಟಿಂಗ್ ನ ಸಾಹಸ ದೃಶ್ಯ ಇದೇ ಜೈಲಿನಲ್ಲಿ ಚಿತ್ರೀಕರಣಗೊಂಡಿತ್ತು.   ಇದೀಗ ವಿಜಯ್ ನಟನೆಯ ದಳಪತಿ ಸಿನಿಮಾ ಚಿತ್ರೀಕರಣ ಈಗಾಗಲೇ ಭರದಿಂದ ಸಾಗುತ್ತಿದೆ. ಮೊದಲ ಹಂತದ ಶೂಟಿಂಗ್ ದೆಹಲಿಯಲ್ಲಿ ಮುಗಿಸಿರುವ ವಿಜಯ್ ಅಂಡ್ ಟೀಂ ಈಗ ಶಿವಮೊಗ್ಗದ ಕಡೆ ಹೊರಟ್ಟಿದ್ದಾರೆ. ಶಿವಮೊಗ್ಗದ ಜೈಲಿನ ಸುತ್ತಮುತ್ತ   ದಳಪತಿ-64 ಚಿತ್ರದ ಶೂಟಿಂಗ್ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತದ ಅನುಮತಿಯನ್ನು ಪಡೆದುಕೊಂಡಿದೆ.  ಡಿಸೆಂಬರ್ 1 ರಿಂದ ಜನವರಿ 18ರ ವರೆಗೆ ಅನುಮತಿ ನೀಡಿದೆ. ವಿಜಯ್ ಜೊತೆ ವಿಜಯ್ ಸೇತುಪತಿ ಕೂಡ ಈ ಚಿತ್ರೀಕರಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments