ಶ್ರೀನಗರ: ಜಮ್ಮುಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೋಪೋರ್ನಲ್ಲಿ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಇಂದು ಬೆಳಗ್ಗೆ ಉಗ್ರರು ಹಾಗೂ ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರನನ್ನು ಹೊಡೆದುರುಳಿಸಿದೆ.
ಖಚಿತ ಮಾಹಿತಿ ಮೇರೆಗೆ ಸೇನೆ ಕಾರ್ಯಾಚರಣೆ ನಡೆಸಿತ್ತು. ಆರಂಭದಲ್ಲಿ ಹುಡುಕಾಟ ಮಾಡಲು ಮಾತ್ರ ಉದ್ದೇಶಿಸಿದ್ದರೂ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಗುಂಡಿನ ದಾಳಿ ನಡೆದಿದೆ. ಇಬ್ಬರಿಂದ ಮೂವರು ಉಗ್ರರನ್ನು ಸೇನೆ ಸುತ್ತುವರೆದಿದೆ. ಈಗಾಗಲೇ ಸೋಪೋರ್ನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮತ್ತೊಂದು ದಾಳಿಯ ಬಗ್ಗೆ ಈಗಾಗಲೇ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಫೆ.14ರಿಂದ ಕರ್ಫ್ಯೂ ಮುಂದುವರೆದಿದೆ.