Home ರಾಜ್ಯ ‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು ಆಗುವುದಿಲ್ಲ ಎಂದು ನಿವೃತ್ತ ಉಪ ತಹಶೀಲ್ದಾರ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೇಲೆನಹಳ್ಳಿ ತಾಂಡ್ಯಾದಲ್ಲಿ ನಡೆದಿದೆ.

ಮೃತರನ್ನ 72 ವರ್ಷದ ಸೋಮಾ ನಾಯಕ್ ಎಂದು ಗುರುತಿಸಲಾಗಿದೆ. ಮೃತ ಸೋಮಾನಾಯಕ್ ನಿವೃತ್ತಿಯ ಬಳಿಕ ಬೇಲೆನಹಳ್ಳಿ ತಾಂಡ್ಯಾದಲ್ಲಿ ತೋಟ ನೋಡಿಕೊಂಡು ಸೆಟ್ಲ್ ಆಗಿದ್ದರು. ಕೋರೋನಾ ಸೋಂಕು ತಗುಲಿದ್ದರಿಂದ ಮನನೊಂದು ಸೋಮಾ ನಾಯಕ್, ನನ್ನಿಂದ ಕುಟುಂಬಸ್ಥರಿಗೆ ಯಾರಿಗೂ ಏನು ಆಗುವುದು ಬೇಡೆಂದು, ಎಲ್ಲರೂ ಚೆನ್ನಾಗಿರಿ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಲ್ಸ್ ರೇಟ್ ಕಡಿಮೆಯಾಗಿ, ಉಸಿರಾಟಕ್ಕೆ ತೊಂದರೆಯಾಗಿ ಸಾವು ಆಗಲು ಜೀವಕ್ಕೆ ಕಷ್ಟವಾದರೆ ಮಾತ್ರ ಆತ್ಮಹತ್ಯೆ. ಸುಖವಾಗಿ ಸತ್ತರೆ ಚಿಂತೆಯೇ ಇಲ್ಲ ಎಂದು ಬರೆದಿಟ್ಟಿದ್ದು, ಅಮ್ಮಾ, ಮಾರಿಕಾಂಭ ದೇವಿ, ನಿನ್ನ ಕ್ಷೇತ್ರವನ್ನ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಅಷ್ಟರಲ್ಲಿಯೇ ನೀನು ನನ್ನನ್ನ ಕರೆದುಕೊಂಡು ಬಿಟ್ಟೆ ಎಂದು ದೇವರಿಗೂ ಕ್ಷಮೆ ಕೇಳಿದ್ದಾರೆ. ನನಗೆ ಕೊರೋನಾ ಪಾಸಿಟಿವ್ ಇದ್ದ ಕಾರಣ. ಅಗ್ನಿಸ್ಪರ್ಶ ಮಾಡಲು ಅನುಕೂಲವಾಗುವಂತೆ ಜಾಗ ಆರಿಸಿಕೊಂಡಿದ್ದೇನೆ. ನನ್ನ ಬಗ್ಗೆ ಯಾರೂ ಯೋಚಿಸಬೇಡಿ. ನಿಮ್ಮ ಜೀವಕ್ಕೆ ದಾರಿ ಮಾಡಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ತೋಟದಲ್ಲಿ ತಮ್ಮ ಕಾರಿನಲ್ಲಿ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 – ಸಚಿನ್ ಶೆಟ್ಟಿ ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments