ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾದ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಬಸವನಬಾಗೇವಾಡಿ ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದೆ.
ಅಂಗಡಿಯಲ್ಲಿ ಮಲಗಿದ್ದ ಅಶೋಕ ದೇಸಾಯಿ (25), ಲಿಂಬಾರಾಮ ದೇಸಾಯಿ (35) ಮೃತ ದುರ್ದೈವಿಗಳು..ಹೆದ್ದಾರಿ ಪಕ್ಕದಲ್ಲಿದ್ದ ಎರಡು ಪ್ಲಾಸ್ಟಿಕ್ ಅಂಗಡಿಯಲ್ಲೇ ಮಲಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ..ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.