ಹಾಸನ : ಮೋದಿಯಷ್ಟು ಸುಳ್ಳು ಹೇಳೋ ಪ್ರಧಾನಮಂತ್ರಿ ಮತ್ತೊಬ್ಬರಿಲ್ಲ ಎಂದು ಭ್ರಷ್ಟಾಚಾರ ವಿರೋಧಿ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ.
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದಿದ್ದರು. ಮಾತೆತ್ತಿದ್ರೆ ನನಗೆ ೫೬ ಇಂಚಿನ ಎದೆ ಇದೆ ಅಂತಾರೆ. ೫೬ ಇಲ್ಲದಿದ್ರೆ ೫೮,೬೦ ಇಂಚಿನ ಎದೆ ಇಟ್ಟುಕೊಳ್ಳಲಿ ಬೇಡ ಅಂದೋರು ಯಾರು ಬಾಡಿ ಬಿಲ್ಡರ್ಗಳ ಎದೆ ಇನ್ನೂ ಜಾಸ್ತಿ ಇರುತ್ತೇ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಏನು ಮಾಡಿಲ್ಲ ಎಂದು ಹೇಳಿದ್ರು , ಈಗ ಮೋದಿ ಮಾಡುತ್ತಿರೋದೇನು, ದೇಶದಲ್ಲಿ ಎಲ್ಲವನ್ನೂ ಮಾರಲು ಹೊರಟಿದ್ದಾರೆ. ದುರಾಡಳಿತ ಮುಚ್ಚಿಹಾಕಲು ಕೋಮುವಾದವನ್ನ ಸೃಷ್ಟಿಮಾಡಿದ್ದಾರೆ. ಜಾತ್ರೆಯಲ್ಲಿ ವ್ಯಾಪಾರ, ಹಲಾಲ್, ನೆನ್ನೆ ಮೊನ್ನೆಯದಾ.? ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದೆ. ಕೈಮುಗಿದು ಪ್ರಾರ್ಥಿಸುತ್ತೇನೆ ಮೊದಲು ಬಿಜೆಪಿ ಕಿತ್ತಾಕಿ ಜೆಡಿಎಸ್ನವರು ಬಿಜೆಪಿ ಬಿ ಟೀಂ ಇಪ್ಪತ್ತೋ, ಮುವತ್ತೋ ಸೀಟು ಬಂದ್ರೆ ಸಾಕು ಎಂದು ಅವರು ಕೂತಿದ್ದಾರೆ. ಇವಾಗ ಕುಮಾರಸ್ವಾಮಿ ೧೨೩ ಸ್ಥಾನ ಗೆಲ್ಲುತ್ತೇವೆ ಎನ್ನುತ್ತಿದ್ದಾರೆ, ಇದು ಸಾಧ್ಯವಾ ಎಂದು ವ್ಯಂಗ್ಯವಾಡಿದ್ದಾರೆ.