Saturday, October 1, 2022
Powertv Logo
Homeರಾಜ್ಯಅಪರಾಧಿ ಜೈಲಿನ ಮಹಡಿಯಿಂದ ಬಿದ್ದು ಸಾವು

ಅಪರಾಧಿ ಜೈಲಿನ ಮಹಡಿಯಿಂದ ಬಿದ್ದು ಸಾವು

ಚಾಮರಾಜನಗರ : ಮೊನ್ನೆಯಷ್ಟೇ ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಯೊಬ್ಬರು ಮೊದಲನೇ ಮಹಡಿಯಿಂದ ಬಿದ್ದು ಅಸುನೀಗಿರುವ ಘಟನೆ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಮಂಜು ಎಂಬವರು ಮೃತ ದುರ್ದೈವಿ. ಇಂದು ಬೆಳಗ್ಗೆ ಜೈಲಿನ ಮೊದಲನೆ ಮಹಡಿಯ ಮೆಟ್ಟಿಲುಗಳಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಚಾಮರಾಜನಗರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ‌ ಎನ್ನಲಾಗಿದೆ. ಕೂಡಲೇ ಜೈಲಿನ ಸಿಬ್ಬಂದಿಗಳು ನೋಡಿ ಹತ್ತಿರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವು ಸಂಭವಿಸಿದೆ.

ಆಯತಪ್ಪಿ ಬಿದ್ದಿರುವುದೊ ಅಥವಾ ಆತ್ಮಹತ್ಯೆ ಮಾಡಿಕೊಂಡಿರುವುದೋ ಎಂಬುದರ ಮಾಹಿತಿ ನಿಖರವಾಗಿ ತಿಳಿದುಬಂದಿಲ್ಲ. ಸದ್ಯಕ್ಕೆ ಚಾಮರಾಜನಗರ ಮೆಡಿಕಲ್ ಆಸ್ಪತ್ರೆಯಲ್ಲಿ ಶವವಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

4 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments