Sunday, May 29, 2022
Powertv Logo
Homeರಾಜ್ಯನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ನಾಳೆಯಿಂದ ಮೇ 18ರವರೆಗೆ ರಾಜ್ಯಾದ್ಯಂತ ಪಿಯು ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆಗೆ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿದ್ದು, ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು, ರೆಗ್ಯುಲರ್ ವಿದ್ಯಾರ್ಥಿಗಳು- 6,00,519, ಪುನರಾವರ್ತಿತ ಅಭ್ಯರ್ಥಿಗಳು- 61,808, ಖಾಸಗಿ ಅಭ್ಯರ್ಥಿಗಳು- 21,928, ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆಯನ್ನು ಮಾಡಲಾಗಿದೆ.

ಕಲಾ ವಿಭಾಗ 2,28,167, ವಾಣಿಜ್ಯ ವಿಭಾಗ 2,45,519, ವಿಜ್ಞಾನ ವಿಭಾಗ 2,10,569 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಒಟ್ಟು 5,241 ಕಾಲೇಜುಗಳಿಂದ ಪರೀಕ್ಷೆಗೆ ನೊಂದಣಿ ಮಾಡಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಇರುತ್ತೆ. ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸಮೀಪದ ಜೆರಾಕ್ಸ್ ಶಾಪ್ಸ್ ಕ್ಲೋಸ್ ಮಾಡಲಾಗುತ್ತದೆ. ಹಾಗೆನೇ ಪರೀಕ್ಷಾ ಅವಧಿಯಲ್ಲಿ ಜೆರಾಕ್ಸ್ ಅಂಗಡಿಗಳಿಗೆ ಬೀಗ ಹಾಕಲಾಗುತ್ತದೆ. ಪರೀಕ್ಷೆ ಪ್ರವೇಶ ಪತ್ರ ತೋರಿಸಿದ್ರೆ ಉಚಿತ ಬಸ್ ಸೇವೆಯನ್ನು ಒದಗಿಸಲಾಗಿದೆ. 2020-21ರಲ್ಲಿ ಕೊರೊನಾ ಹಿನ್ನೆಲೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದ್ದು, ಈ ವರ್ಷ ಪ್ರಶ್ನೆ ಪತ್ರಿಕೆ ಸರಳೀಕೃತಗೊಳಿಸಿರುವ ಇಲಾಖೆ SSLC ಮಾದರಿಯಲ್ಲೇ ಸರಳ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಕೆಯನ್ನು ಮಾಡಲಾಗಿದೆ.

 

- Advertisment -

Most Popular

Recent Comments