Homeರಾಜ್ಯಬೆಂಗಳೂರುಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಂಡಿದ್ದವು.

ಶಾಲಾ ಶುಲ್ಕ ಶೇ.15% ಹೆಚ್ಚಳ ಮಾಡದಂತೆ ಸರ್ಕಾರ ಹೇಳಿತ್ತು. ಸರ್ಕಾರದ ಮಾತಿಗೆ ನಾವು ಬೆಲೆ ಕೊಟ್ಟಿದ್ದೇವೆ. ಆದರೆ ಎಷ್ಟೋ ಪಾಲಕರು ಪೂರ್ಣ ಸಂಬಳ ತೆಗೆದುಕೊಳ್ಳುತ್ತಿದ್ದಾರೆ. ಯಾವ ಮಾನದಂಡದ ಮೇಲೆ ನಾವು ಅವರನ್ನ ಶುಲ್ಕ ಕೇಳದಿರಲು ಸಾಧ್ಯ.  ಎಷ್ಟೋ ಪೋಷಕರು ಕಳೆದ ವರ್ಷದ ಶೇ.70 ರಷ್ಟು ಶುಲ್ಕವನ್ನೇ ಕಟ್ಟಿಲ್ಲ. ಕಳೆದ ಎರಡು ಮೂರು ವರ್ಷಗಳಿಂದ ಶಾಲಾ ಶುಲ್ಕದ ಹಣ ಬಾಕಿ ಉಳಿದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಭ್ರಷ್ಟರು, ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments