Home ರಾಜ್ಯ ಮನೆಗಳ್ಳತನ‌ ಮಾಡುತ್ತಿದ್ದ ಆಪ್ರಾಪ್ತ ಸೇರಿ ಮೂವರು ಅಂದರ್

ಮನೆಗಳ್ಳತನ‌ ಮಾಡುತ್ತಿದ್ದ ಆಪ್ರಾಪ್ತ ಸೇರಿ ಮೂವರು ಅಂದರ್

ವಿಜಯಪುರ : ಮನೆಗಳ್ಳತನ ಮಾಡುತ್ತಿದ್ದ ಒಬ್ಬ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸುವಲ್ಲಿ ವಿಜಯಪುರ ನಗರದ ಜಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 12ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ಆಟೋ ವಶ ಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಗೋಬಿಮಂಚೂರಿ ಮಾರಾಟ ಮಾಡುತ್ತಿದ್ದ ಗಣೇಶ ನಗರ ನಿವಾಸಿ ಕಿರಣ ವಿಶಾಲ ಶರ್ಮಾ, ಆಟೋರಿಕ್ಷಾ ಚಾಲಕ ವಿರೇಶ ಶಿವಾನಂದ ಬಂಥನಾಳ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ‌ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಆಟೋದಲ್ಲಿ ಮನೆಗೆ ಬರುವ ಇವರು ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು. ಜಲನಗರ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ಹಾಗೂ ಗಾಂಧಿಚೌಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಆರೋಪಿಗಳಿಂದ 190 ಗ್ರಾಂ ಚಿನ್ನ ಮತ್ತು 145 ಗ್ರಾಂ ಬೆಳ್ಳಿ ಜತೆಗೆ 1.50 ಲಕ್ಷ ರೂ ನಗದು, ಒಂದು ಲ್ಯಾಪ್​ಟಾಪ್​​ ಹಾಗೂ ಕ್ಯಾಮರಾ ವಶ ಪಡಿಸಿಕೊಂಡಿದ್ದಾರೆ.  ಪ್ರಕರಣ ಭೇದಿಸಿದ ಎಲ್ಲ ಪೊಲೀಸ್ ಸಿಬ್ಬಂದಿಗೆ ಎಸ್ ಪಿ ಅನುಪಮ್ ಅಗರವಾಲ್ ಬಹುಮಾನ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments