ಬೀದರ್: ಕೊನೆಗೂ ಅನುಭವ ಮಂಟಪಕ್ಕೆ ಕಾಲ ಕೂಡಿ ಬಂದಿದೆ. ಕೆಲವೇ ಕ್ಷಣಗಳಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಭೂಮಿ ಪೂಜೆಯನ್ನು ನೇರವೆರಿಸಲಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು ಭೂಮಿ ಪೂಜೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜಿಲ್ಲೆಯ ಒಲ್ಡ್ ಸಿಟಿಯಲ್ಲಿರುವ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಉದ್ಘಾಟನೆ. ಇದೇ ವೇಳೆ ನರ್ಸಿಂಗ್ ಕಾಲೇಜು, ಜಿಲ್ಲಾ ಕ್ರೀಡಾಂಗಣ,ಇಂಜಿನಿಯರಿಂಗ್ ಕಾಲೇಜು, ಹಾಸ್ಟೆಲ್ ಉದ್ಘಾಟನೆ ಮಾಡಲಿದ್ದಾರೆ.