ಟಿಪ್ಪು ಜಯಂತಿ ರದ್ದುಗೊಳಿಸಿದ ರಾಜ್ಯ ಸರ್ಕಾರ

0
571

ಬೆಂಗಳೂರು:ಅಧಿಕಾರಕ್ಕೇರಿದ ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಸರಕಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ನಿರ್ಧರಿಸಲಾಗಿತ್ತು. ಇದು ಅನೇಕ ವಿವಾದಗಳಿಗೂ ಕಾರಣವಾಗಿತ್ತು. ಟಿಪ್ಪು ಜಯಂತಿಯನ್ನು ವಿರೋಧಿಸಿ ಅನೇಕ ಪ್ರತಿಭಟನೆಗಳು, ಸಾವು ನೋವುಗಳು ಸಂಭವಿಸಿದ್ದವು. ಸರ್ಕಾರದ ಈ ನಿರ್ಧಾರವನ್ನು ಸಂಘಪರಿವಾರಗಳು ಮತ್ತು ಬಿಜೆಪಿ ಬಲವಾಗಿ ಟೀಕಿಸಿದ್ದವು. ಈ ಎಲ್ಲಾ ವಿರೋಧದ ನಡುವೆಯೂ ಟಿಪ್ಪು ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಗುತ್ತಿತ್ತು.
ಇದೀಗ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಬಿಜೆಪಿ ಶಾಸಕ ಕೆ.ಜಿ ಬೋಪಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ್ರು. ಇದೀಗ ಈ ನಿಟ್ಟಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here