ದೇಶದಲ್ಲಿ 27 ಸಾವಿರ ಗಡಿ ದಾಟಿದ ಸೋಂಕಿತರು : ಸಾವಿನ ಸಂಖ್ಯೆ 872 ಕ್ಕೆ ಏರಿಕೆ

0
253

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಲೇ ಇದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೇವಲ 24 ಗಂಟೆಯಲ್ಲಿ 1,396 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 27,892 ಕ್ಕೆ ಏರಿಕೆಯಾಗಿದೆ. ಇನ್ನು 48 ಮಂದಿ ಸಾವನ್ನಪ್ಪಿದ್ದು,  ದೇಶದಲ್ಲಿ ಈವರೆಗೆ 872 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಸೋಂಕಿತರ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಲ್ಲಿ ಒಂದೇ ದಿನದಲ್ಲಿ 440 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟು 8,068 ಜನರಲ್ಲಿ ಸೋಂಕು ದೃಢಪಟ್ಟಿದೆ. 24 ಗಂಟೆಯಲ್ಲಿ 19 ಜನ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು 342 ಮಂದಿಯನ್ನು ಕಿಲ್ಲರ್ ಕೊರೋನಾ ಬಲಿ ಪಡೆದುಕೊಂಡಿದೆ. ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿ ಗುಜರಾತ್ ಇದೆ. ಗುಜಾರಾತ್​ನಲ್ಲಿ ಒಟ್ಟು 3,301 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ನಿನ್ನೆ ಸಂಜೆಯಿಂದ ಇವತ್ತಿನವರೆಗೆ 230 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸಾವನ್ನಪ್ಪಿದವರ ಸಂಖ್ಯೆ ನೂರರ ಗಡಿ ದಾಟಿದೆ. ಮೂರನೇ ಸ್ಥಾನದಲ್ಲಿ ದೆಹಲಿ ಇದ್ದು, 2,918 ಪ್ರಕರಣಗಳು ಧೃಢಪಟ್ಟಿವೆ. 24 ಗಂಟೆಯಲ್ಲಿ 293 ಮಂದಿಗೆ ಸೋಂಕು ಹರಡಿದೆ. 54 ಮಂದಿ ಸಾವನ್ನಪ್ಪಿದ್ದಾರೆ.

ಇವೆಲ್ಲದರ ನಡುವೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯು ಹೆಚ್ಚಾಗುತ್ತಿದೆ. ಈವರೆಗೆ ದೇಶದಲ್ಲಿ ಒಟ್ಟು 6,185 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here