ಬೆಂಗಳೂರು: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದಿನ ಹೆಲ್ತ್ ಬುಲೆಟಿನ್ ಈಗಾಗಲೇ ಪ್ರಕಟವಾಗಿದ್ದು, ಅದರ ಪ್ರಕಾರ ಇಂದು ಒಟ್ಟು 23 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,079 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಒಟ್ಟು 36 ಜನ ಸೋಂಕಿನಿಂದ ಸಾವನ್ನಪ್ಪಿದ್ದು, 494 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲೀಗ 548 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವರದಿ ಪ್ರಕಾರ ಪತ್ತೆಯಾಗಿರುವ 23 ಕೇಸ್ಗಳಲ್ಲಿ 14 ಕೇಸ್ಗಳು ಬೆಂಗಳೂರು ಒಂದರಲ್ಲೇ ಪತ್ತೆಯಾಗಿದ್ದು, ಪೇಷೆಂಟ್ ನಂಬರ್ 653 ಸೋಂಕಿತ ಒಬ್ಬನಿಂದಲೇ ಈ 14 ಜನರಿಗೂ ಸೋಂಕು ತಗುಲಿರುತ್ತದೆ. ಇವರೆಲ್ಲರೂ ಆತನ ದ್ವಿತೀಯ ಸಂಪರ್ಕ ಬೆಳೆಸಿದ್ದರು ಎಂದು ತಿಳಿದುಬಂದಿದೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 200 ಗಡಿ ದಾಟಿದೆ.
ಗ್ರೀನ್ ಝೋನಾಗಿದ್ದ ಹಾಸನದಲ್ಲಿ ಇಂದು ಮೂವರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂವರು ಸೋಂಕಿತರು ಮುಂಬೈಗೆ ಪ್ರಯಾಣ ಬೆಳೆಸಿದ್ದ ಹಿನ್ನೆಲೆ ಸೋಂಕು ಹರಡಿದೆ.
ಇನ್ನುಳಿದಂತೆ ಮಂಡ್ಯ, ಉಡುಪಿ, ಧಾರವಾಡ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ತಲಾ ಒಂದು ಪ್ರಕರಣ ಪತ್ತೆಯಾಗಿದ್ದು, ಮಂಡ್ಯದಲ್ಲಿ 40 ವರ್ಷದ ಪುರುಷನಲ್ಲಿ ಸೋಂಕು ಕಂಡುಬಂದಿದ್ದು, ಸೋಂಕಿತ ವ್ಯಕ್ತಿ ಕೋಲಾರ ಮತ್ತು ಬೆಂಗಳೂರಿಗೆ ಪ್ರುಯಾಣ ಬೆಳೆಸಿದ್ದ ಎಂದು ತಿಳಿದುಬಂದಿದೆ. ಉಡುಪಿಯಲ್ಲಿ ಒಂದು ವರ್ಷದ ಹೆಣ್ಣು ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ದುಬೈಗೆ ಪ್ರಯಾಣ ಬೆಳೆಸಿ ವಾಪಾಸ್ಸಾಗಿರುವುದೇ ಸೋಂಕಿನ ಮೂಲವಾಗಿದೆ. ದಾವಣಗೆರೆಯಲ್ಲಿ ಪೇಷೆಂಟ್ 533 ವ್ಯಕ್ತಿಯ ದ್ವಿತೀಯ ಸಂಪರ್ಕದಿಂದ 65 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಹಮದಾಬಾದ್ಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಬಳ್ಳಾರಿಯಲ್ಲಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಬಾಗಲಕೋಟೆ ಹಾಗೂ ಧಾರವಾಡದಲ್ಲಿ ತಲಾ ಒಬ್ಬರಲ್ಲಿ ಕೊರೋನಾ ದೃಢಪಟ್ಟಿದ್ದು, ಈ ಇಬ್ಬರು ಸೋಂಕಿತರು ಮುಂಬೈಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ.
zithromax 250 mg tablets
zithromax intravenous
3springer