Home ಕ್ರೀಡೆ P.Cricket ಇಂದು ನಾಲ್ಕನೇ ಟಿ20 ಕದನ - ಸರಣಿ ಸೋತಿರೋ ಕಿವೀಸ್​ಗೆ ಗೆಲ್ಲಲೇ ಬೇಕಾದ ಒತ್ತಡ

ಇಂದು ನಾಲ್ಕನೇ ಟಿ20 ಕದನ – ಸರಣಿ ಸೋತಿರೋ ಕಿವೀಸ್​ಗೆ ಗೆಲ್ಲಲೇ ಬೇಕಾದ ಒತ್ತಡ

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್ ವಿರುದ್ಧದ 5 ಮ್ಯಾಚ್​ಗಳ ಟಿ20 ಸರಣಿಯನ್ನು ಈಗಾಗಲೇ ಗೆದ್ದಿರುವ ಭಾರತ ಕ್ಲೀನ್ ಸ್ವೀಪ್ ಉತ್ಸಾಹದಲ್ಲಿದ್ದು, ಇಂದು ವೆಲ್ಲಿಂಗ್ಟನ್​ನಲ್ಲಿ ನಡೆಯಲಿರೋ ನಾಲ್ಕನೇ ಪಂದ್ಯ ನಡೆಯಲಿದೆ.  ತವರಲ್ಲಿ ಸರಣಿ ಸೋತಿರೋ ನ್ಯೂಜಿಲೆಂಡ್ ಇಂದಿನ ಮ್ಯಾಚಲ್ಲಿ ಗೆದ್ದು ಮರ್ಯಾದೆ ಉಳಿಸಿಕೊಳ್ಳೋ ತವಕದಲ್ಲಿದೆ. 

ಈ ಪಂದ್ಯದಲ್ಲಿ ಇಲ್ಲಿಯ ತನಕ ಅವಕಾಶ ಪಡೆಯದ ಆಟಗಾರರಲ್ಲಿ ಕೆಲವರಿಗೆ ಕಣಕ್ಕಿಳಿಯಲು ಅವಕಾಶ ಸಿಗುವ ಸಾಧ್ಯತೆಯಿದೆ. ಭಾರತ ಈಗಾಗಲೇ ಸರಣಿ ಗೆದ್ದಿರುವುದರಿಂದ ಇಲ್ಲಿಯ ತನಕ ವೀಕ್ಷಕರಾಗಿಯೇ ಉಳಿದ ಕ್ರಿಕೆಟಿಗರನ್ನು ಆಡಿಸಲು ತಂಡದ ಆಡಳಿತ ಮಂಡಳಿ ಉತ್ಸುಕವಾಗಿದೆ. ಅಲ್ಲದೇ ಕಳೆದ ಮೂರೂ ಪಂದ್ಯಗಳಲ್ಲಿ ಭಾರತ ಬದಲಾಗದ ತಂಡದೊಂದಿಗೆ ಹೋರಾಟ ಸಂಘಟಿಸಿ ಭರಪೂರ ಯಶಸ್ಸು ಕಂಡಿತ್ತು. ಹಾಗಾಗಿ 4ನೇ ಪಂದ್ಯದಲ್ಲಿ  ಈ ಪ್ರಯೋಗಕ್ಕೆ ಟೀಮ್ ಇಂಡಿಯಾ ಕೈ ಹಾಕುವ ಯೋಚನೆ ಮಾಡಿದೆ.

ನವದೀಪ್‌ ಸೈನಿ, ಸಂಜು ಸ್ಯಾಮ್ಸನ್‌, ಪಂತ್‌, ಕುಲದೀಪ್‌, ವಾಷಿಂಗ್ಟನ್‌ ಸುಂದರ್‌ ಇಲ್ಲಿವರೆಗೆ ವೀಕ್ಷಕರ ಸಾಲಿನಲ್ಲೇ ಉಳಿದಿದ್ದರು. ಇವರಲ್ಲಿ ಒಂದಿಬ್ಬರಾದರೂ ವೆಲ್ಲಿಂಗ್ಟನ್‌ನಲ್ಲಿ ಅವಕಾಶ ಪಡೆಯಬಹುದೇ ಎಂಬ ನಿರೀಕ್ಷೆ ಎಲ್ಲರಲ್ಲೂ ಇದೆ.

ಭಾರತದ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬದಲಾವಣೆ ಸಂಭವಿಸುವುದು ಅನುಮಾನ. ರೋಹಿತ್‌, ರಾಹುಲ್‌, ಕೊಹ್ಲಿ, ಅಯ್ಯರ್‌, ಪಾಂಡೆ ಅವರನ್ನೊಳಗೊಂಡ ಬ್ಯಾಟಿಂಗ್‌ ಲೈನ್‌ಅಪ್‌ ಬಲಿಷ್ಠವಾಗಿದೆ. ಆದರೆ ಆಲ್‌ರೌಂಡರ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಇದೇ ಮಾತನ್ನು ಹೇಳುವಂತಿಲ್ಲ. ದುಬೆ ಬದಲು ವಾಷಿಂಗ್ಟನ್‌ ಸುಂದರ್‌, ಠಾಕೂರ್‌ ಬದಲು ಸೈನಿ ಅವಕಾಶ ಪಡೆಯುವ ಸಾಧ್ಯತೆಯಿದೆ.

ಇನ್ನೊಂದೆಡೆ ತವರಲ್ಲೇ ಮುಖಭಂಗ ಅನುಭವಿಸಿ ತೀವ್ರ ಒತ್ತಡದಲ್ಲಿರುವ ನ್ಯೂಜಿಲೆಂಡ್ ಉಳಿದೆರಡು ಪಂದ್ಯಗಳಲ್ಲಿ ಪ್ರತಿಷ್ಠೆಯನ್ನು ಪಣಕ್ಕೊಡ್ಡಲೇಬೇಕಿದೆ. ಗೆದ್ದು ಸರಣಿ ಸೋಲಿನ ಅಂತರವನ್ನು ಕಡಿಮೆಗೊಳಿಸಲು ಕಾರ್ಯತಂತ್ರ ರೂಪಿಸಬೇಕಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments