ಬೆಂಗಳೂರು: ದೇಶಾದ್ಯಂತ ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಪ್ರದಾನಮಂತ್ರಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ.
ವೀಡಿಯೋ ಕಾನ್ಪರೆನ್ಸ್ ಮೂಲಕ ಸಭೆಯನ್ನ ನಡೆಸಲಿದ್ದು,ಕೋವಿಡ್ ಸಾಂಕ್ರಾಮಿಕ ರೋಗ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ. ಇಂದು ಸಂಜೆ 6:30ಕ್ಕೆ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕೊರೋನಾ ತಡೆಗಟ್ಟುವ ಬಗ್ಗೆ ನರೇಂದ್ರ ಮೋದಿ ಮಾಹಿತಿ ಪಡೆಯಲಿದ್ದಾರೆ.