Home ದೇಶ-ವಿದೇಶ ಜಗತ್ತಿನಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 55,84,267 ಕ್ಕೆ ಏರಿಕೆ : ಕಳೆದ 24 ಗಂಟೆಯಲ್ಲಿ 3...

ಜಗತ್ತಿನಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 55,84,267 ಕ್ಕೆ ಏರಿಕೆ : ಕಳೆದ 24 ಗಂಟೆಯಲ್ಲಿ 3 ಲಕ್ಷದ 47 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ದೃಢ

ಜಿನೇವಾ: ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೋವಿಡ್-19 ಗೆ ಕೇವಲ 24 ಗಂಟೆಯಲ್ಲಿ 3,096 ಕ್ಕೂ ಹೆಚ್ಚು ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು ಜಗತ್ತಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,47,613 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಒಟ್ಟು 55,84,267 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕೇವಲ 24 ಗಂಟೆಯಲ್ಲಿ ಸೋಂಕು 90,184 ಜನರಿಗೆ ಸೋಂಕು ಹರಡಿದೆ. ಇವೆಲ್ಲದರ ನಡುವೆ 23,62,390 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಗತ್ತಿನ ದೊಡ್ಡಣ್ಣ ಅಮೆರಿಕಾವನ್ನು ಮಹಾಮಾರಿ ಬಿಡದೇ ಕಾಡುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ  ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ ಕೇವಲ 24 ಗಂಟೆಯಲ್ಲಿ 19,790 ರಷ್ಟು ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,06,226 ಏರಿಕೆಯಾಗಿದೆ. ಇನ್ನು ಅಮೆರಿಕಾದಲ್ಲಿ ಈವರೆಗೆ 4,64,674 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸಾವನ್ನಪ್ಪಿದವರ ಸಂಖ್ಯೆಯೂ 99,805 ಕ್ಕೆ ಏರಿಕೆಯಾಗಿದೆ.

ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದ್ದು, 13,051 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,76,669 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ 23,522 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಒಟ್ಟು 1,53,833 ಜನರಿಗೆ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ರಷ್ಯಾ ಮೂರನೇ ಸ್ಥಾನಕ್ಕೆ ಬಂದು ನಿಂತಿದ್ದು, ರಷ್ಯಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, 3,53,427 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಒಟ್ಟು 3,633 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಇನ್ನು ಸ್ಪೇನ್​ನಲ್ಲಿ ಒಟ್ಟು 2,82,480 ಜನ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಒಟ್ಟು 26,837 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರ ನಡುವೆ 1,96,958 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಸ್ಪೇನ್ ನಂತರದ ಸ್ಥಾನದಲ್ಲಿ ಯುಕೆ ಇದ್ದು, ಒಂದೇ ದಿನದಲ್ಲಿ 1,625 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,61,184 ಕ್ಕೆ ಏರಿದೆ. ಇನ್ನು ಅಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗಿದ್ದು, 36,914 ಕ್ಕೇರಿಕೆಯಾಗಿದೆ.

ಮೂರನೇ ಸ್ಥಾನದಲ್ಲಿದ್ದ ಇಟಲಿಯು 6 ನೇ ಸ್ಥಾನಕ್ಕೆ ಇಳಿದಿದ್ದು, ಅಲ್ಲಿ ಕಳೆದ 24 ಗಂಟೆಯಲ್ಲಿ 300 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,30,158 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯು ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆಯೂ 32 ಸಾವಿರದ ಗಡಿ ದಾಟಿದೆ. ಇಲ್ಲಿ ಚೇತರಿಸಿಕೊಂಡವರ ಸಂಖ್ಯೆಯೂ ಏರಿಕೆಯಾಗಿದ್ದು, 1,41,981 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments