Home ರಾಜ್ಯ ‘ಬಿಡದಿ ಟೊಯೋಟಾ ಘಟಕದ ಕಾರ್ಮಿಕರ ಪ್ರತಿಭಟನೆ’

‘ಬಿಡದಿ ಟೊಯೋಟಾ ಘಟಕದ ಕಾರ್ಮಿಕರ ಪ್ರತಿಭಟನೆ’

ರಾಮನಗರ: ಬಿಡದಿ ಟಯೋಟ ಘಟಕದ ಕಾರ್ಮಿಕರ ಮುಷ್ಕರ 40ನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಕಾರ್ಮಿಕರು ಹೋರಾಟವನ್ನು ತೀವ್ರಗೊಳಿಸಿದ್ದು, ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದ್ದರು.

ಇಂದು ಕಾರ್ಮಿಕರು ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಆಗಮಿಸಿದ್ದರು. ಇದರಿಂದಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಬಂದ ಸಾವಿರಾರು ಕಾರ್ಮಿಕರು ರಸ್ತೆಯಲ್ಲಿಯೇ ಪ್ರತಿಭಟಿಸಿದರು. ಟೊಯೋಟಾ ಘಟಕದಲ್ಲಿ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಲು ಜಿಲ್ಲಾಡಳಿತ ಕೂಡಲೇ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೋರ್ಡ್‌ಗಳನ್ನು ಹಿಡಿದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸಾಲಾಗಿ ನಿಂತು ಕಾರ್ಮಿಕರು ಘೋಷಣೆಗಳನ್ನು ಕೂಗಿದರು. ಕೈಯಲ್ಲಿ ಕೆಂಪು ಬಾವುಟ ಹಿಡಿದು, ಸರ್ಕಾರ , ಜಿಲ್ಲಾಡಳಿತ ಮತ್ತು ಕಾರ್ಖಾನೆಯ ಅಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕಾರ್ಮಿಕರು ಕೂಗಿದರು. ಸಹೋದ್ಯೋಗಿಗಳ ಅಮಾನತು ಖಂಡಿಸಿ ನಡೆಸುತ್ತಿರುವ ಮಷ್ಕರ 40ನೇ ದಿನಕ್ಕೆ ಕಾಲಿಟ್ಟಿದೆ.

ಈ ಕೂಡಲೇ ಸರ್ಕಾರದ ಮಧ್ಯ ಪ್ರವೇಶಕ್ಕೆ ಬಿಡದಿ ಟೊಯೊಟಾ ಕಾರ್ಮಿಕರ ಸಮಸ್ಯೆಗಳು ಬಗೆಹರಿಸುವಂತೆ ಒತ್ತಾಯಿಸಿದರು. ಕಾರ್ಮಿಕರ ಹೋರಾಟಕ್ಕೆ ಸಂಘಸಂಸ್ಥೆಗಳ ಬೆಂಬಲ, ಟಯೋಟ ಕಾರ್ಮಿಕರ ಪ್ರತಿಭಟನೆಗೆ ಕಾರ್ಮಿಕ ಸಂಘಟನೆಗಳು, ರೈತ ಸಂಘ, ರಕ್ಷಣಾ ವೇದಿಕೆ ಸೇರಿದಂತೆ ಅನೇಕ ಸಂಘಟನೆಗಳು ಇಂದು ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಕಂಪನಿಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments