ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮರ್ಪಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಭರವಸೆಯನ್ನು ನೀಡಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಜಿಲ್ಲೆಯಲ್ಲಿ ತೊಂದರೆಯಾಗದಂತೆ ಸಮರ್ಪಕವಾಗಿ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರೊಂದಿಗೆ ಈ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರುಗಳು ಉಪಸ್ಥಿತರಿದ್ದರು.