Home ರಾಜ್ಯ `ಬಿಎಸ್​ವೈ ಬೇಗ ಗುಣಮುಖರಾಗಲಿ ‘ :  ದೇವೇಗೌಡ್ರು ಸೇರಿದಂತೆ ಗಣ್ಯರ ಟ್ವೀಟ್

`ಬಿಎಸ್​ವೈ ಬೇಗ ಗುಣಮುಖರಾಗಲಿ ‘ :  ದೇವೇಗೌಡ್ರು ಸೇರಿದಂತೆ ಗಣ್ಯರ ಟ್ವೀಟ್

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೊರೋನಾದಿಂದ ಬೇಗ ಗುಣಮುಖರಾಗಲಿ ಅಂತ  ಮಾಜಿ ಪ್ರಧಾನಿ ಹೆಚ್.ಡಿ  ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ನಾಯಕರು ಟ್ವೀಟ್  ಮಾಡಿದ್ದಾರೆ.

ಮುಖ್ಯಮಂತ್ರಿ ಬಿಎಸ್​ವೈಗೆ ಕೊರೋನಾ ಪಾಸಿಟಿವ್

ಮಾನ್ಯ ಮುಖ್ಯಮಂತ್ರಿ  ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ .

                                                             -ಹೆಚ್​.ಡಿ ದೇವೇಗೌಡ, ಮಾಜಿ ಪ್ರಧಾನಿ

  ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ‌‌ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.

                                                             -ಸಿದ್ದರಾಮಯ್ಯ, ವಿಪಕ್ಷ ನಾಯಕ

 

ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ  ಯಡಿಯೂರಪ್ಪರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ.

                                                    -ಡಾ. ಕೆ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

ಆದಷ್ಟು ಬೇಗ ಗುಣಮುಖರಾಗಿ ಚೇತರಿಸಿಕೊಂಡು ಮತ್ತೆ ಕಾರ್ಯೋನ್ಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

                                                          -ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ

ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

                                               –  ಹೆಚ್.ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

 

ಶ್ರೀ ಯಡಿಯೂರಪ್ಪನವರೇ, ಕೊರೋನಾ ಸೋಂಕಿಗೆ ನೀವು ಒಳಗಾಗಿರುವುದು ಬೇಸರದ ವಿಚಾರ. ನೀವು ಶೀಘ್ರವೇ ಗುಣಮುಖರಾಗಿ ಎಂದು ಹಾರೈಸುತ್ತೇನೆ.

                                        – ಡಾ.ಜಿ ಪರಮೇಶ್ವರ್, ಮಾಜಿ ಉಪಮುಖ್ಯಮಂತ್ರಿ 

ಪ್ರವಾಹ ಇರಲಿ, ಕೊರೋನಾ ಇರಲಿ, ರಾಜ್ಯಕ್ಕೆ ಸಂಕಷ್ಟ ಬಂದಾಗಲೆಲ್ಲ ಅವಿರತವಾಗಿ ಶ್ರಮಿಸಿ ಜನರ ಪ್ರಾಣ ರಕ್ಷಣೆಯನ್ನು ಮಾಡಲು ಹೋರಾಟ ಮಾಡಿದ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪ ರವರು ಕೊರೋನಾವನ್ನು ಸೋಲಿಸಿ ಆದಷ್ಟು ಬೇಗ ಗುಣಮುಖರಾಗಲೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. 

                                                – ಪ್ರತಾಪ್ ಸಿಂಹ, ಸಂಸದ

ಮುಖ್ಯಮಂತ್ರಿ ಯಡಿಯೂರಪ್ಪನವರು ಶೀಘ್ರ ಗುಣಮುಖರಾಗಲಿ 

                                – ಡಿ.ಕೆ ಶಿವಕುಮಾರ್. ಕೆಪಿಸಿಸಿ ಅಧ್ಯಕ್ಷ

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments