Home ದೇಶ-ವಿದೇಶ ಟ್ರಂಪ್ ಟ್ವಿಟ್ಟರ್ ಖಾತೆ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!

ಟ್ರಂಪ್ ಟ್ವಿಟ್ಟರ್ ಖಾತೆ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!

ಅಮೇರಿಕ: ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

ಡೊನಾಲ್ಡ್ ಟ್ರಂಪ್ ಅಧಿಕೃತ ಖಾತೆಯಿಂದ ಇತ್ತೀಚಿನ ಟ್ವೀಟ್ಗಳನ್ನ ಸೂಕ್ಷ್ಮವಾಗಿ ಪರಿಶೀಲಿಸಿದ ಟ್ವಿಟರ್ ತನ್ನ ನಿರ್ಧಾರವನ್ನು ವಿವರಿಸುವ ಬ್ಲಾಗ್ ಪೋಸ್ಟ್ ನಲ್ಲಿ, ಹಿಂಸಾಚಾರವನ್ನು ಮತ್ತಷ್ಟು ಪ್ರಚೋದಿಸುವ ಅಪಾಯದಿಂದಾಗಿ ನಾವು ಡೊನಾಲ್ಡ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ತಿಳಿಸಿದೆ.

ಗಲಭೆ ಕುರಿತಂತೆ ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್, ತಮ್ಮ ಬೆಂಬಲಿಗರ್ಯಾರು ಅಗೌರವಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದಲ್ಲದೇ, ಮತ್ತೊಂದು ಟ್ವೀಟ್ನಲ್ಲಿ ನಾನು ಜನವರಿ 20 ರಂದು ನಡೆಯುವ ಜೋ ಬೈಡನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಗವಹಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಟ್ವೀಟ್ ಗಳನ್ನು ಗಂಭೀರವಾಗಿ ಪರಿಗಣಿಸಿದ ಟ್ವಿಟ್ಟರ್ ಸಂಸ್ಥೆ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments