Home ಸಿನಿ ಪವರ್ ರಿಯಲ್​​ ಸ್ಟಾರ್​ಗೆ 51ನೇ ಹುಟ್ಟುಹಬ್ಬದ ಸಂಭ್ರಮ - ಅಭಿಮಾನಿಗಳಿಗೆ ಉಪ್ಪಿ ಭರ್ಜರಿ ಗಿಫ್ಟ್

ರಿಯಲ್​​ ಸ್ಟಾರ್​ಗೆ 51ನೇ ಹುಟ್ಟುಹಬ್ಬದ ಸಂಭ್ರಮ – ಅಭಿಮಾನಿಗಳಿಗೆ ಉಪ್ಪಿ ಭರ್ಜರಿ ಗಿಫ್ಟ್

ಇಂದು ಸ್ಯಾಂಡಲ್​ವುಡ್​​ನ ಮೂವರು ಸ್ಟಾರ್​ಗಳ ಹುಟ್ಟುಹಬ್ಬ. ಸಾಹಸ ಸಿಂಹ ವಿಷ್ಣುವರ್ಧನ್ ಅವರ 69ನೇ ಜಯಂತೋತ್ಸವ ಒಂದಾದರೆ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹಿರಿಯ ನಟಿ ಶ್ರುತಿ ಅವರಿಗೂ ಜನ್ಮದಿನದ ಸಂಭ್ರಮ.
ಉಪೇಂದ್ರ ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆಯ ತಮ್ಮ ನಿವಾಸದ ಬಳಿ ಅಭಿಮಾನಿಗಳೊಂದಿಗೆ ಉಪ್ಪಿ ಖುಷಿ ಖುಷಿಯಾಗಿ ಬರ್ತ್​ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾರೆ. ಬೆಳಗ್ಗಿನಿಂದಲೇ ಉಪೇಂದ್ರ ನಿವಾಸದ ಎದುರು ಸೇರಿದ ವಿವಿಧ ಊರುಗಳಿಂದ ಬಂದ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಿದ್ರು.
ಹುಟ್ಟುಹಬ್ಬಕ್ಕಾಗಿ ಕೇಕ್, ಹೂವಿನ ಹಾರ, ವಿಶೇಷ ಉಡುಗೊರೆಗಳನ್ನು ತರ್ಬೇಡಿ. ನಿಮ್ಗೇನಾದ್ರು ಗಿಫ್ಟ್ ಕೊಡ್ಬೇಕು ಅಂತಿದ್ರೆ ಗಿಡಗಳನ್ನು ನೀಡಿ, ನಾನವುಗಳನ್ನು ಪೋಷಿಸ್ತೀನಿ ಅಂತ ಉಪೇಂದ್ರ ಹೇಳಿದ್ದರು. ಹೀಗಾಗಿ ಬಹುತೇಕ ಅಭಿಮಾನಿಗಳು ಗಿಡಗಳನ್ನು ಗಿಫ್ಟ್ ಆಗಿ ಉಪ್ಪಿಗೆ ನೀಡಿದರು.
ಇನ್ನು ಹುಟ್ಟುಹಬ್ಬದ ಪ್ರಯುಕ್ತ ಉಪೇಂದ್ರ ಅಭಿನಯದ ‘ಹೋಂ ಮಿನಿಸ್ಟರ್’ ಚಿತ್ರತಂಡ ಟೀಸರ್ – ಪೋಸ್ಟರ್ ಬಿಡುಗಡೆ ಮಾಡಿತು.ಅದೇರೀತಿ ‘ಬುದ್ಧಿವಂತ 2’ ಚಿತ್ರದಲ್ಲಿನ ಡಿಫರೆಂಟ್ ಲುಕ್​ ಬರ್ತ್​ ಡೇ ಗಿಫ್ಟ್ ರೂಪದಲ್ಲಿ ಅಭಿಮಾನಿಗಳಿಗೆ ಸಿಕ್ಕಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments