Home ದೇಶ-ವಿದೇಶ ಅಮೆರಿಕಾದಲ್ಲಿ ಕೊರೋನಾ ಮೃತ್ಯು ನರ್ತನ : ಒಂದೇ ದಿನ 2,108 ಮಂದಿ ಸಾವು

ಅಮೆರಿಕಾದಲ್ಲಿ ಕೊರೋನಾ ಮೃತ್ಯು ನರ್ತನ : ಒಂದೇ ದಿನ 2,108 ಮಂದಿ ಸಾವು

ವಾಷಿಂಗ್ಟನ್: ಕೋವಿಡ್ -19 ಅಟ್ಟಹಾಸಕ್ಕೆ ವಿಶ್ವದ ದೊಡ್ಡಣ್ಣ ತತ್ತರಿಸಿ ಹೋಗಿದ್ದು, ದಿನೇ ದಿನೇ ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ. ಇದರೊಂದಿಗೆ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದ್ದು, ಒಂದೇ ದಿನ 2 ಸಾವಿರ ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, 5 ಲಕ್ಷದ ಗಡಿ ದಾಟಿದೆ. ಕೇವಲ 24 ಗಂಟೆಯಲ್ಲಿ 35,089 ಮಂದಿಗೆ ಸೋಂಕು ತಗುಲಿದೆ. ಶುಕ್ರವಾರ ಒಂದೇ ದಿನದಲ್ಲಿ 2,108 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯ ತನ್ನ ವರದಿಯಲ್ಲಿ ತಿಳಿಸಿದೆ. ಇನ್ನು ಜಗತ್ತಿನಾದ್ಯಂತ 1,02,734 ಜನರನ್ನು ಬಲಿ ತೆಗೆದುಕೊಂಡಿದ್ದು, ಸೋಂಕಿತರ ಪ್ರಮಾಣ 16,99,628 ಕ್ಕೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments