Home ದೇಶ-ವಿದೇಶ ಅಮೆರಿಕಾದಲ್ಲಿ ಅಟ್ಟಹಾಸ ಮೆರೆಯುತ್ತಿದೆ ಕೊರೋನಾ : ಕೇವಲ 24 ಗಂಟೆಯಲ್ಲಿ 1,691 ಮಂದಿ ಸಾವು

ಅಮೆರಿಕಾದಲ್ಲಿ ಅಟ್ಟಹಾಸ ಮೆರೆಯುತ್ತಿದೆ ಕೊರೋನಾ : ಕೇವಲ 24 ಗಂಟೆಯಲ್ಲಿ 1,691 ಮಂದಿ ಸಾವು

ವಾಷಿಂಗ್ಟನ್: ಕೊರೋನಾ ವೈರಸ್ ಅಮೆರಿಕಾದಲ್ಲಿ ಅಟ್ಟಹಾಸ ಮೆರೆಯುತ್ತಲೇ ಇದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 29,744 ಜನರಿಗೆ ಸೋಂಕು ತಗುಲಿದ್ದು, 1,691 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. 

ಜಗತ್ತಿನಾದ್ಯಂತ ಕದಂಬಬಾಹು ಚಾಚುತ್ತಿರುವ ಕೊರೋನಾಗೆ ಈಗಾಗಲೇ ಅಮೆರಿಕಾ ತತ್ತರಿಸಿ ಹೋಗಿದೆ. ವಿಶ್ವ ದ ಸೋಂಕಿತರ ಅಂಕಿ ಅಂಶದ ಪಟ್ಟಿಯಲ್ಲಿ ಅಮೆರಿಕಾ ಮೊದಲ ಸ್ಥಾನದಲ್ಲಿದ್ದು, ಈವರೆಗೆ ಒಟ್ಟು 11,60,774 ಜನರಲ್ಲಿ ಸೊಂಕು ದೃಢಪಟ್ಟಿದೆ. ಇನ್ನು ಇಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದ್ದು, ಒಟ್ಟು 67,444 ಜನ ಸೋಂಕಿತರು ಬಲಿಯಾಗಿದ್ದಾರೆ. ಇವೆಲ್ಲದರ ನಡುವೆ ಒಂದು ಸಮಾಧಾನಕರ ವಿಷಯವೆಂದರೆ 1,73, 318 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ವಿಶ್ವದಾದ್ಯಂತ ಸೋಂಕಿತರ ಸಂಖ್ಯೆ 34,81,351 ಕ್ಕೇರಿಕೆಯಾಗಿದೆ. ಇನ್ನು 2,44,663 ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮಧ್ಯೆ 11,20314 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments