ಬೆಂಗಳೂರು: ಇಂದು ನಾಡಿನೆಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ದೇವರ ದರ್ಶನಕ್ಕೆ ಸಾಲುಗಟ್ಟಿ ಭಕ್ತರು ನಿಂತಿದ್ದಾರೆ. ಹಾಗೇ ಹಲವೆಡೆ ದೇವರ ದರ್ಶನಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಕೊವೀಡ್ ನಿಯಮಗಳ ನಡುವೆ ಭಕ್ತರಿಗೆ ದರ್ಶನಕ್ಕೆ ಅವಕಾಶವನ್ನು ನೀಡಲಾಗಿದೆ.
ತಿರುಪತಿಯಲ್ಲಿ ಇಂದಿನಿಂದ ಜನವರಿ 3 ರವರೆಗೆ ತಿಮ್ಮಪ್ಪನ ಸನ್ನಿಧಿಯಲ್ಲಿ 10 ದಿನ ವಿಶೇಷ ಪೂಜೆ ಮಾಡಲಾಗುತ್ತದೆ.