Home ರಾಜ್ಯ 'ಚುನಾವಣೆಯಲ್ಲಿ ಸೋತ ಹಿನ್ನೆಲೆ ದನದ ಕೊಟ್ಟಿಗೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು'

‘ಚುನಾವಣೆಯಲ್ಲಿ ಸೋತ ಹಿನ್ನೆಲೆ ದನದ ಕೊಟ್ಟಿಗೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು’

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಸಗನೀಪುರದಲ್ಲಿ ಗುರುವಾರ ರಾತ್ರಿ ಗೆದ್ದ, ಸೋತ ಗುಂಪುಗಳ ನಡುವೆ ನಡೆದ ಘರ್ಷಣೆ ಮಾಸುವ ಮುನ್ನವೇ ಅಜ್ಜಂಪುರ ತಾಲೂಕಿನ ಜಾವೂರು ಹೊಸಳ್ಳಿಯಲ್ಲಿ ಚುನಾವಣೆ ದ್ವೇಷಕ್ಕೆ ಕೊಟ್ಟಿಗೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ದನದ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿದ್ದು, 2 ಜಾನುವಾರು ಮೃತಪಟ್ಟಿವೆ. ನಾಲ್ಕೈದು ಜಾನುವಾರುಗಳು ತೀವ್ರವಾದ ಸುಟ್ಟ ಗಾಯಗಳಿಂದ ನರಳುತ್ತಿವೆ. ಜನರ ನಡುವಿನ ದ್ವೇಷಕ್ಕೆ ಜಾನುವಾರುಗಳನ್ನು ಸಜೀವ ದಹನ ಮಾಡಿದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಾವೂರು ಹೊಸಳ್ಳಿಯ ಚಂದ್ರಪ್ಪ ಎಂಬುವವರಿಗೆ ಈ ಕೊಟ್ಟಿಗೆ ಸೇರಿದ್ದು, ಕೊಟ್ಟಿಗೆಯಲ್ಲಿದ್ದ ಕೊಬ್ಬರಿ ತೆಂಗಿನಕಾಯಿಗಳೂ ಘಟನೆಯಲ್ಲಿ ಭಸ್ಮವಾಗಿವೆ. ಶುಕ್ರವಾರ ರಾತ್ರಿ 1 ಗಂಟೆ ಹೊತ್ತಿಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ 5 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

– ಸಚಿನ್ ಶೆಟ್ಟಿ ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments