Sunday, May 29, 2022
Powertv Logo
Homeರಾಜ್ಯವಿಧಾನಪರಿಷತ್​ ಚುನಾವಣೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಪರಿಷತ್​ ಚುನಾವಣೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಪರಿಷತ್​​  ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ನಾಲ್ವರು, ಕಾಂಗ್ರೆಸ್‌ನ ಇಬ್ಬರು ಹಾಗೂ ಜೆಡಿಎಸ್‌ನ ಒಬ್ಬರು ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದಾರೆ.

ಮೇಲ್ಮನೆ ಚುನಾವಣೆಗೆ ಒಟ್ಟು 9 ಜನರು ನಾಮಪತ್ರ ಸಲ್ಲಿಸಿದ್ದರು. ಆದರೆ ಪಕ್ಷೇತರರಿಬ್ಬರ ನಾಮಪತ್ರಕ್ಕೆ  ಸೂಚಕರಿಲ್ಲದೆ ತಿರಸ್ಕೃತವಾಗಿತ್ತು. ಹೀಗಾಗಿ ಕೇವಲ 7 ಜನರು ಮಾತ್ರ ಚುನಾವಣಾ ಕಣದಲ್ಲಿ ಉಳಿದಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, ಯಾರೂ ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

17 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments