Home ರಾಜ್ಯ ಕೊಲೆಯಾದ ಯುವಕನ ಮನೆಗೆ ಡಿಸಿ, ಎಸ್​ಪಿ ಭೇಟಿ

ಕೊಲೆಯಾದ ಯುವಕನ ಮನೆಗೆ ಡಿಸಿ, ಎಸ್​ಪಿ ಭೇಟಿ

ವಿಜಯಪುರ : ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬೂದಿಹಾಳ ಪಿ. ಎಚ್. ಗ್ರಾಮದಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಮತ್ತು ಎಸ್ ಪಿ ಅನುಪಮ ಅಗ್ರವಾಲ ಗ್ರಾಮಕ್ಕೆ ಭೇಟಿ ನೀಡಿ ಮೃತನ ಕುಟುಂಬಸ್ಥರಿಗೆ ಸಾಂತ್ವನ‌ ಹೇಳಿದರು.

 ದಲಿತ ಯುವಕ ಅನಿಲ್ ಇಂಗಳಗಿ ಕುಟುಂಬದವರಿಗೆ ಸಾಂತ್ವನ ಹೇಳುವುದಲ್ಲದೇ ಸರ್ಕಾರದಿಂದ ಬರುವ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ನಿಷ್ಪಕ್ಷಪಾತ ತನಿಖೆ ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಸಿಂದಗಿ ತಾಲೂಕ ತಹಶೀಲ್ದಾರ್ ಸಂಜೀವ ಕುಮಾರ ದಾಸರ, ಸಿಪಿಐ ಪಟೇಲ, ಪಿಎಸ್ಐ ಸಂಗಮೇಶ ಹೊಸಮನಿ ಕೂಡ ಉಪಸ್ಥಿತರಿದ್ದರು.

ನಾನಾ ಸಂಘಟನೆಗಳ ಮುಖಂಡರು ಮಾತನಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments