Home ರಾಜ್ಯ ರಾಯಣ್ಣ, ಕನಕದಾಸ , ಚೆನ್ನಮ್ಮ ಭಾವಚಿತ್ರಕ್ಕೆ ಕೆಸರೆರಚಿದ ದುಷ್ಕರ್ಮಿಗಳು | ಭಾವಚಿತ್ರಕ್ಕೆ ಹಾಲಿನ ಅಭಿಷೇಕ...

ರಾಯಣ್ಣ, ಕನಕದಾಸ , ಚೆನ್ನಮ್ಮ ಭಾವಚಿತ್ರಕ್ಕೆ ಕೆಸರೆರಚಿದ ದುಷ್ಕರ್ಮಿಗಳು | ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ ಪೋಲಿಸರು

ಕುಂದಾನಗರಿ ಬೆಳಗಾವಿಯ ಪೀರನ ವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರ ಇಡೀ ರಾಜ್ಯದ ಗಮನ ಸೆಳೆದಿತ್ತು. ಸದ್ಯ ಸುಖಾಂತ್ಯ ಕಂಡಿದೆ . ಇನ್ನು ಗುಮ್ಮಟನಗರಿ ವಿಜಯಪುರದಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರ ರಾಣಿ ಚೆನ್ನಮ್ಮಳ ಭಾವಚಿತ್ರಕ್ಕೆ ಕಿಡಿಗೇಡಿಗಳು ಕೆಸರು ಎರಚುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ರಾಯಣ್ಣ ಭಾವಚಿತ್ರಕ್ಕೆ ಅಭಿಮಾನಿಗಳು ಹಾಗೂ ಪೊಲೀಸ್​​ ಅಧಿಕಾರಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಈಗಷ್ಟೆ ಶಾಂತವಾಗಿದ್ದ ಭೀಮಾತೀರದಲ್ಲಿ ಕೋಮು-ಗಲಭೆ ಸೃಷ್ಠಿಸುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಇಂಡಿ ತಾಲ್ಲೂಕಿನ ಹಂಜಗಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದ ರಾಯಣ್ಣನ ಪ್ರತಿಮೆಗೆ ಕಿಡಿಗೇಡಿಗಳು ಕೆಸರೆರಚಿದ್ದಾರೆ. ಇನ್ನು ಇದೇ ಫಲಕದಲ್ಲಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಭಕ್ತ ಕನಕದಾಸರ ಮುಖಕ್ಕೂ ಕೆಸರನ್ನು ಎರಚಲಾಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದೇಶ ಭಕ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಯಣ್ಣ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು ಕೆಲಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಕೆಸರು ಎರಚಿದ ಕಟೌಟ್ ಅನ್ನು ತೊಳೆದು, ಕೋಮು-ಗಲಭೆ ಸೃಷ್ಠಿಸುವ ಕೆಲಸ ಮಾಡಿದ ನೀಚರನ್ನು ಬಂಧಿಸುವಂತೆ ಆಗ್ರಹಿಸಿದರು. ಇಂತಹ ಕುಕೃತ್ಯ ಮಾಡಿ ಜಾತಿ-ಧರ್ಮಗಳ ಮಧ್ಯೆ ವಿಷಬೀಜ ಬಿತ್ತಲು ಯತ್ನಿಸುವ ಸಮಾಜ ಘಾತುಕರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು..

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರಿಗೆ ಅವಮಾನ ಮಾಡುವ ಮೂಲಕ ವಿವಾದದ ಕಿಡಿ ಹೊತ್ತಿಸಲಾಗಿದ್ದು, ಮತ್ತೆ ರಾಯಣ್ಣನ ವಿವಾದ ಶುರುವಾಗಿದೆ. ಹಂಜಗಿ ಗ್ರಾಮದಲ್ಲಿ ಗಲಾಟೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಕೃತ್ಯವೆಸಗಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪ್ರತಿಭಟನಾಕಾರರ ಮನವೊಲಿಸಿದರು. ಜೊತೆಗೆ ರಾಯಣ್ಣ, ಚೆನ್ನಮ್ಮ ಹಾಗೂ ಕನಕದಾಸರ ಭಾವಚಿತ್ರಗಳಿಗೆ ಸ್ವತಃ ಪೊಲೀಸರೇ ಹಾಲಿನ ಅಭಿಷೇಕ ಮಾಡುವ ಮೂಲಕ ವಿವಾದ ತಣ್ಣಗಾಗಿಸಿದರು. 

ಅಭಿಮಾನಿಗಳು ಹಾಗೂ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸದಿದ್ರೆ ಮತ್ತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮೇಲ್ನೋಟಕ್ಕೆ ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗಿದ್ರೂ ಸಹ ಬೂದಿ ಮುಚ್ಚಿದ ಕೆಂಡದಂತಿದ್ದು, ಮತ್ಯಾವಾಗ ಜಾತಿ ಗಲಭೆ ಏಳತ್ತೋ ಎಂದು ಚಿಂತಿಸುವಂತಾಗಿದೆ.

-ಸುನೀಲ್ ಭಾಸ್ಕರ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments