Home ರಾಜ್ಯ ಕಲ್ಲುಗಣಿಗಾರಿಕೆಯಿಂದ ಬಿರುಕು ಬಿಡುತ್ತಿವೆ ಮನೆಗಳು!

ಕಲ್ಲುಗಣಿಗಾರಿಕೆಯಿಂದ ಬಿರುಕು ಬಿಡುತ್ತಿವೆ ಮನೆಗಳು!

ವಿಜಯಪುರ: ಕಲ್ಲುಗಣಿಗಾರಿಕೆಗೆ ನಿಷೇಧವಿದ್ದರೂ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಲೇ ಇದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಜನರ ಮನೆಗಳು ಬಿರುಕು ಬಿಡುತ್ತಿವೆ. ಇಲ್ಲಿ ಯಾವಾಗ ಏನಾಗುತ್ತೋ ಅನ್ನೋ ಭಯದಲ್ಲಿ ಗ್ರಾಮಸ್ಥರು ಕ್ಷಣ ಕ್ಷಣಕ್ಕೂ ಜೀವ ಕೈಯಲ್ಲಿ ಹಿಡಿದು ಬದುಕುತ್ತಿದ್ದಾರೆ.

ಕಲ್ಲು ಗಣಿಗಾರಿಕೆಗೆ ನಿಷೇಧವಿದ್ರೂ ನಿಯಮಗಳನ್ನು ಗಾಳಿಗೆ  ತೂರಿ ರಾತ್ರಿ ಸಮಯದಲ್ಲಿ ಸ್ಫೋಟ ನಡೆಯುತ್ತಿದೆ. ಸಿಡಿ ಮದ್ದು ಬಳಸಿ ಅಕ್ರಮ ಕ್ರಷರ್​ಗಳಲ್ಲಿ ಕಲ್ಲು ಬ್ಲಾಸ್ಟ್​ ಮಾಡಲಾಗುತ್ತಿದ್ದು, ಈ  ಮದ್ದು ಗುಂಡುಗಳ ತೀವ್ರತೆಗೆ ಒಂದು ಕಿಲೋ ಮೀಟರ್ ದೂರ ಬ್ಲಾಸ್ಟ್​​ ಆದ ಕಲ್ಲುಗಳು  ಹಾರುತ್ತಿವೆ. ಇದರಿಂದ ಬ್ಯಾಲ್ಯಾಳ ಗ್ರಾಮದ ಮನೆಗಳು ಬಿರುಕು ಬಿಡುತ್ತಿವೆ.

ಈ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಆಗ್ತಿರೋದು ಒಂದೆರಡು ಸಮಸ್ಯೆ ಅಲ್ಲ. ಕ್ರಷರ್ ಧೂಳಿನಿಂದ ಅಸ್ತಮ, ಶ್ವಾಸಕೋಶದ ಕಾಯಿಲೆ ಬ್ಲಾಸ್ಟಿಂಗ್​​ನಿಂದ ಅಂತರ್ಜಲ ಮಟ್ಟವೂ ಕಡಿಮೆಯಾಗುತ್ತಿದೆ. ​ ಗುಂಡಿ ಬಿದ್ದ ರಸ್ತೆಯಲ್ಲಿ ಓಡಾಡಲು ವಾಹನ ಸವಾರರು ಪರದಾಡುವಂತಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments