Home ಕ್ರೀಡೆ P.Cricket ಕನ್ನಡದಲ್ಲಿ ವಿರಾಟ್ ಕೊಹ್ಲಿ ಪೋಸ್ಟ್​..!

ಕನ್ನಡದಲ್ಲಿ ವಿರಾಟ್ ಕೊಹ್ಲಿ ಪೋಸ್ಟ್​..!

ಟೀಮ್ ಇಂಡಿಯಾದ ಕ್ಯಾಪ್ಟನ್ ವಿರಾಟ್​ ಕೊಹ್ಲಿ ನೇತೃತ್ವದ ರಾಯಲ್​ ಚಾಲೆಂಜರ್ಸ್ ಬೆಂಗಳೂರು 12ನೇ ಆವೃತ್ತಿಯ ಐಪಿಎಲ್​ನಲ್ಲಿ ನಿರಾಸ ಪ್ರದರ್ಶನವನ್ನು ನೀಡಿದೆ. ಆದರೆ, ಅಂತಿಮ ಪಂದ್ಯದಲ್ಲಿ ಗೆಲವಿನ ನಗೆಬೀರಿ ಅಭಿಮಾನಿಗಳನ್ನು ಸ್ವಲ್ಪ ಮಟ್ಟಿಗೆ ಸಮಾಧಾನ ಪಡಿಸಿ ಟೂರ್ನಿಯಿಂದ ಹೊರ ಬಂದಿದೆ.
ನಿನ್ನೆ ನಡೆದ ಕೊನೆಯ ಮ್ಯಾಚ್​ಗೂ ಮುನ್ನ ವಿರಾಟ್ ಮತ್ತು ಎಬಿ ಡಿವಿಲಿಯರ್ಸ್​ ವಿಡಿಯೋ ಮೂಲಕ ಆರ್​ಸಿಬಿ ಫ್ಯಾನ್ಸ್​ಗೆ ಧನ್ಯವಾದ ತಿಳಿಸಿದ್ದರು. ಇಂದು ವಿರಾಟ್​ ಕೊಹ್ಲಿ ಫೇಸ್​ ಬುಕ್, ಟ್ವೀಟರ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡದಲ್ಲಿ ಪೋಸ್ಟ್ ಮಾಡಿ ಆರ್​ಸಿಬಿ ಅಭಿಮಾನಿಳಿಗೆ ಪ್ರೀತಿಯಿಂದ ಧನ್ಯವಾದ ತಿಳಿಸಿದ್ದಾರೆ. ಅದೂ ಕೂಡ ಕನ್ನಡದಲ್ಲಿ ಅನ್ನೋದು ವಿಶೇಷ. 
ಹೌದು, ವಿರಾಟ್ ಕೊಹ್ಲಿ, ಅಭಿಮಾನಿಗಳಿಗೆ, ಗ್ರೌಂಡ್​ ಸ್ಟಾಫ್, ಟೀಮ್​ ಸ್ಟಾಫ್​ಗೆ ಥ್ಯಾಂಕ್ಸ್ ಹೇಳಿದ್ದಾರೆ. ಜೊತೆಗೆ ಮುಂದಿನ ವರ್ಷ ಬಲಾಡ್ಯ ತಂಡವಾಗಿ ಕಮ್​ಬ್ಯಾಕ್​ ಆಗೋ ಭರವಸೆಯನ್ನು ನೀಡಿದ್ದಾರೆ. ಇದೆಲ್ಲಕ್ಕಿಂತ ಖುಷಿಯ ವಿಚಾರ ಅಂದ್ರೆ, ವಿರಾಟ್​ ”ನೀವು ಇಲ್ಲಾಂದ್ರೆ ನಾವು ಏನು ಅಲ್ಲಾ ” ಅಂತ ಕನ್ನಡದಲ್ಲೇ ಪೋಸ್ಟ್ ಮಾಡಿದ್ದಾರೆ.
ಒಟ್ನಲ್ಲಿ ವಿರಾಟ್ ಐಪಿಎಲ್​ನಿಂದಾಗಿ ಬೆಂಗಳೂರಿಗರ, ಕನ್ನಡಿಗರ ಮನೆ ಮಗನಾಗಿದ್ದಾರೆ. ಇಂದು ಕನ್ನಡದಲ್ಲಿ ಪೋಸ್ಟ್ ಮಾಡಿ ಮತ್ತಷ್ಟು ಹತ್ತಿರವಾಗಿದ್ದಾರೆ. ಎನಿವೇ.. ಆರ್​ ಸಿಬಿ ಮುಂದಿನ ಸಲ ಕಪ್​ ಗೆಲ್ಲಲಿ ಅಂತ ಆಶಿಸೋಣ.. ಅದಕ್ಕೂ ಮಿಗಿಲಾಗಿ ವಿರಾಟ್ ನೇತೃತ್ವದಲ್ಲಿ ಟೀಂ ಇಂಡಿಯಾ ವರ್ಲ್ಡ್​​​ಕಪ್​ಗೆ ಮುತ್ತಿಕಲಿ ಅಂತ ಹಾರೈಸೋಣ. ಆಲ್​ ದಿ ಬೆಸ್ಟ್ ವಿರಾಟ್​.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments