Tuesday, September 27, 2022
Powertv Logo
Homeರಾಜ್ಯವಿಷ್ಣುವರ್ಧನ್ ಅಭಿಮಾನಿಗಳ ಕನಸಿಗೆ ನೀರೆರೆದ ಸಿಎಂ ಬಿಎಸ್​ವೈ!

ವಿಷ್ಣುವರ್ಧನ್ ಅಭಿಮಾನಿಗಳ ಕನಸಿಗೆ ನೀರೆರೆದ ಸಿಎಂ ಬಿಎಸ್​ವೈ!

ಬೆಂಗಳೂರು: ಸಾಹಸ ಸಿಂಹ ವಿಷ್ಣು ಅಭಿಮಾನಿಗಳು ಕಾಯುತ್ತಿದ್ದ ದಿನ ಇದೀಗ ಹತ್ತಿರ ಬಂದಿದೆ. ಇನ್ನು ನಾಲ್ಕೇ ದಿನದಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಪಾಯ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ಮೂಲಕ ದಾದಾ ಅಭಿಮಾನಿಗಳ ಕನಸಿಗೆ ಸಿಎಂ ನೀರೆರೆದಿದ್ದಾರೆ. 

ಡಿಸೆಂಬರ್ 30 ರಂದು ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಹಿನ್ನೆಲೆ ಭಾರತಿ ವಿಷ್ಣುವರ್ಧನ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ವಿಷ್ಣು ಸ್ಮಾರಕದ ಕುರಿತು ಚರ್ಚೆ ಮಾಡಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸ್ಮಾರಕಕ್ಕೆ ಅಡಿಪಾಯ ಹಾಕುತ್ತೇವೆ ಎಂದು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

ವಿಷ್ಣುವರ್ಧನ್ ಸ್ಮಾರಕವನ್ನು ಮಾಡಬೇಕೆಂಬುದು ವಿಷ್ಣು ಅಭಿಮಾನಿಗಳು ಹಾಗೂ ವಿಷ್ಣು ಕುಟುಂಬದವರ ಕನಸಾಗಿತ್ತು. ಆದರೆ ಸ್ಮಾರಕ ನಿರ್ಮಾಣಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿದ್ದ ಕಾರಣ ಸ್ಮಾರಕ ನಿರ್ಮಾಣವಾಗಿರಲಿಲ್ಲ. ಆದರೆ ಇದೀಗ ಸ್ಮಾರಕ ನಿರ್ಮಾಣಕ್ಕೆ ಕಾಲ ಕೂಡಿಬಂದಿದೆ. 

LEAVE A REPLY

Please enter your comment!
Please enter your name here

- Advertisment -

Most Popular

Recent Comments