Home ಪವರ್ ಪಾಲಿಟಿಕ್ಸ್ ಮತದಾನ ಮಾಡಿ ಗೆಲ್ಲಿಸಿ,  ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತೇವೆ : ಗಂಗೂಬಾಯಿ ಮನವಿ

ಮತದಾನ ಮಾಡಿ ಗೆಲ್ಲಿಸಿ,  ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತೇವೆ : ಗಂಗೂಬಾಯಿ ಮನವಿ

ಕಲಬುರಗಿ: ಭೀಮಾ ನದಿ ತೀರದ ಕಲಬುರಗಿಯ ಅಫಜಲಪುರ ತಾಲೂಕಿನ ಬಳೂರ್ಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಂಪತಿ ಸ್ಪರ್ಧೆಗಿಳಿದಿದ್ದು, ಮತ ನೀಡಿ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಪತಿ ಅರವಿಂದ ದೊಡ್ಡಮನಿ ಎಂಬುವರು ಸತತ 6 ಬಾರಿ ಆಯ್ಕೆಯಾಗಿ 7ನೇ ಸಲ ಪುನರಾಯ್ಕೆ ಬಯಸಿ 4ನೇ ವಾರ್ಡ್‌ನಲ್ಲಿ ಕಣಕ್ಕಿಳಿದಿದ್ದಾರೆ. ಇವರ ಪತ್ನಿ ಗಂಗೂಬಾಯಿ ವಾರ್ಡ್ ಸಂಖ್ಯೆ 3 ರಿಂದ ಮೊದಲ ಬಾರಿಗೆ ಅಖಾಡಕ್ಕಿಳಿದಿದ್ದಾರೆ. ಆರು ಬಾರಿ ಗೆಲುವು ಸಾಧಿಸಿ ನಮ್ಮ ಯಜಮಾನರು ಸೇವೆ ಸಲ್ಲಿಸುತ್ತಿದ್ದಾರೆ‌. ಈ ಬಾರಿ ಇಬ್ಬರೂ ಕಣದಲ್ಲಿದ್ದೇವೆ. ಜನರು ಮತದಾನ ಮಾಡುವ ಮೂಲಕ ಇಬ್ಬರನ್ನು ಗೆಲ್ಲಿಸಿದರೆ, ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಗಂಗೂಬಾಯಿಯವರು ಜನರಲ್ಲಿ ಮನವಿ ಮಾಡಿದರು.

ಇನ್ನೂ ಅಫಜಲಪುರ ತಾಲೂಕಿನಲ್ಲಿ 90 ಗ್ರಾಮಗಳಿವೆ. 28 ಗ್ರಾಮ ಪಂಚಾಯಿತಿಗಳಿಂದ ಸುಮಾರು 230 ಮತಗಟ್ಟೆಗಳಿವೆ. ಒಟ್ಟು 498 ಸದಸ್ಯರ ಸ್ಥಾನಗಳಿದ್ದು, 1,63,497 ಮತದಾರರಿದ್ದಾರೆ. 28 ಗ್ರಾಮ ಪಂಚಾಯಿತಿಗಳಲ್ಲಿ ಒಂದಾದ ಬಳೂರ್ಗಿ ಗ್ರಾಮ ಪಂಚಾಯಿತಿ ಬಹಳ ಜಿದ್ದಾಜಿದ್ದಿನ ಕಣ ಎಂದು ಗುರುತಿಸಿಕೊಂಡಿದೆ. ಇಲ್ಲಿ 15 ಸ್ಥಾನಗಳಿದ್ದು, 41 ಜನ ಆಯ್ಕೆ ಬಯಸಿ ಕಣದಲ್ಲಿದ್ದಾರೆ.

 ಅದೇನೇ ಇರಲಿ, ಕಳೆದ ಚುನಾವಣೆಗಿಂತ ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೊಸೆ-ಅತ್ತೆ, ಅಣ್ಣ-ತಂಗಿ, ಗಂಡ ಹೆಂಡತಿ ಹೀಗೆ ಪ್ರತಿಯೊಬ್ಬರು ಚುನಾವಣೆ ಅಖಾಡಕ್ಕೆ ಧುಮುಕುತ್ತಿರುವುದು ವಿಶೇಷವಾಗಿದೆ. ಒಟ್ಟಾರೆಯಾಗಿ ಅಧಿಕಾರ ಮಾತ್ರ ಅನುಭವಿಸದೇ, ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕು ಎಂಬುವುದು ಜನರ ಆಶಯವಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments