Home ರಾಜ್ಯ ಗೋಹತ್ಯೆ ನಿಷೇಧಕ್ಕೆ ನಮ್ಮ ಬೆಂಬಲ ಇದೆ‌ : ಮಾಜಿ ಸಚಿವ ಸಿ.ಎಂ ಇಬ್ರಾಹಿಂ

ಗೋಹತ್ಯೆ ನಿಷೇಧಕ್ಕೆ ನಮ್ಮ ಬೆಂಬಲ ಇದೆ‌ : ಮಾಜಿ ಸಚಿವ ಸಿ.ಎಂ ಇಬ್ರಾಹಿಂ

ಹುಬ್ಬಳ್ಳಿ: ಮೈತ್ರಿ ಸರ್ಕಾರ ಪತನಕ್ಕೆ ಯಾರು ಕಾರಣ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಅದರ ಬಗ್ಗೆ ನಾನು ಯಾಕೆ ವಿಶ್ಲೇಷಣೆ ಮಾಡಲಿ.ಮತ್ತೆ ಪುನರ್ ವಿವಾಹಕ್ಕೆ ಸಾಧ್ಯ ಇದೆಯಾ ಅನ್ನೋದನ್ನು ನಾವು ನೋಡ್ತಾ ಇದ್ದೀವಿ.ನಾವೇನಿದ್ದರೂ ಸೇರಿಸುವುದಕ್ಕೆ ನೊಡುವವರು ಹೊರತು, ಮುರಿಯುವವರಲ್ಲ ಎಂದು ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಕೀಯ, ರೈಲ್ವೆ ಸ್ಟೇಷನ್ ಜಂಕ್ಷನ್ ಆದಂತಿದೆ. ಯಾರು ಹತ್ತಿ ಹೋಗುತ್ತಾರೆ ಅವರು ದಡ ಸೇರುತ್ತಾರೆ ಎಂದರು.

ಲವ್ ಜಿಹಾದ್ ಕಾನೂನು ಕುರಿತು ಮಾತನಾಡಿದ ಅವರು, ಲವ್ ಜಿಹಾದ್ ಕಾನೂನು ತಂದು ಏನ್ ಮಾಡಲು ಸಾದ್ಯ.?. ಲವ್ ಜಿಹಾದ್ ಗಂಡ ಹೆಂಡತಿ ರಾಜಿ ಆದರೆ ಏನು ಮಾಡೋದಕ್ಕೆ ಆಗುತ್ತದೆ. ಒತ್ತಾಯಪೂರ್ವಕವಾಗಿ ಮಾಡಿದರೆ ಕ್ರಮ ಕೈಗೊಳ್ಳಬ ಹುದು ಎಂದರು.

ಗೋಹತ್ಯೆ ನಿಷೇಧಕ್ಕೆ ನಮ್ಮ ಬೆಂಬಲ ಇದೆ‌. ಮುಸ್ಲಿಂರಿಗೆ ನಾನು ಕೈ ಮುಗಿದು ಬೇಡಿಕೊಳ್ಳುತ್ತೇನೆ, ಗೋವು ಯಾರು ತಿನ್ನಬಾರದು. ಆದರೆ,  ಬಂಜೆಯಾದ ಗೋವು ನೋಡಿಕೊಳ್ಳುವವರು ಯಾರು? ಅದಕ್ಕಾಗಿ ಪ್ರತಿ ಪಂಚಾಯತ್ ಗೆ ಒಂದು ಗೋಶಾಲೆ ತೆರೆಯಿರಿ.

ರೈತರು, ಚರ್ಮಕಾರಿಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ ಅವರು, ನಮ್ಮ ಸರ್ಕಾರದ ಕೆಲಸಗಳು ಇವಲ್ಲ, ಗೋ ಸಾಕಾಣಿಕೆಯ ವ್ಯವಸ್ಥೆ ನೀವು ಮಾಡಿಕೊಡಿ ಎಂದರು.

ಕೊಡವರು ಗೋಮಾಂಸ ಸೇವನೆ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ನನಗೆ ಗೊತ್ತಿಲ್ಲ, ಯಾವುದೇ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ. ಅದರ ಬಗ್ಗೆ ನಾನು ಚರ್ಚೆ ಮಾಡೋದಿಲ್ಲ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments