ಬೆಂಗಳೂರು: ಮುಂದಿನ ತಮಿಳುನಾಡು ವಿಧಾನ ಸಭಾ ಚುನಾವಣೆಗೆ ಈಗಾಗಲೇ ಪ್ರಚಾರ ಆರಂಭಿಸಿರುವ ನಟ, MNM ಪಕ್ಷದ ಮುಖ್ಯಸ್ಥ ಕಮಲ್ ಹಾಸನ್, 2021ರ ಚುನಾವಣೆ ವೇಳೆ ತೃತೀಯ ರಂಗ ಮುನ್ನಲೆಗೆ ಬರಲಿದೆ ಎಂದು ತಿಳಿಸಿದ್ದಾರೆ.
ಕಮಲ್ ಹಾಸನ್ ಅವರು ತಿರುನೆಲ್ವೇಲಿ ಜಿಲ್ಲೆಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಕಾರ್ಯಕರ್ತರನ್ನು ಭೇಟಿಯಾದರು. ಈ ವೇಳೆ ಮಾತನಾಡಿಸಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ ಸರ್ಕಾರ ರಚಿಸುವ ಮೂಲಕ ಭ್ರಷ್ಟಾಚಾರ ಮುಕ್ತ ತಮಿಳುನಾಡು ನಿರ್ಮಾಣ ಮಾಡುತ್ತೇವೆ ಎಂದರು. ನಮ್ಮ ಸೈದ್ಧಾಂತಿಕ ನಿಲುವಿನ ಬಗ್ಗೆ ಸಹಮತ ಇರೋರ ಪರ ನಾವು ಮೈತ್ರಿ ಮಾಡಿಕೊಳ್ಳುತ್ತೇವೆ. ನಾನು ಎಂಜಿಆರ್ ಪರಂಪರೆಯ ವಿಸ್ತರಣೆ ಎಂದು ಹೇಳಿಕೊಳ್ಳುವ ಹಕ್ಕಿದೆ ಎಂದರು.