ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ. ಹಿರಿಯ ಅಧಿಕಾರಿಗಳ ಜೊತೆ ಕಮಲ್ ಪಂಥ್ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿದ ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂಥ್.
ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ನೈಟ್ ಕರ್ಫ್ಯೂ ಭದ್ರತೆ ಕುರಿತು ಕಮಲ್ ಪಂಥ್ ಚರ್ಚೆ ಮಾಡಲಿದ್ದಾರೆ. ಸರ್ಕಾರದಿಂದ ನಮಗೆ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಆದೇಶ ಬಂದ ಮೇಲೆ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಪ್ರತಿಕ್ರಿಯೆ ನೀಡಿದ್ದಾರೆ.