Home ರಾಜ್ಯ ಪಾದರಾಯನಪುರ ಪುಂಡರಿಗೆ ಅದ್ದೂರಿ ಸ್ವಾಗತ ಕೋರಿದ ಜಮೀರ್..!

ಪಾದರಾಯನಪುರ ಪುಂಡರಿಗೆ ಅದ್ದೂರಿ ಸ್ವಾಗತ ಕೋರಿದ ಜಮೀರ್..!

ಬೆಂಗಳೂರು: ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ಜೈಲು ಪಾಲಗಿದ್ದ ಪುಂಡರನ್ನು ಮತ್ತೆ ಪಾದರಾಯನಪುರಕ್ಕೆ ಶಾಸಕ ಜಮೀರ್ ಅಹಮದ್ ಖಾನ್ ಅದ್ದೂರಿ ಸ್ವಾಗತ ಕೋರುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ 150 ಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್ ಮಾಡಿದ್ದರು. ಆದರೆ ಕೆಲವರಲ್ಲಿ ಕೊರೋನಾ ಸೋಂಕು ದೃಢ ಪಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಉಳಿದ 126 ಜನ ಪುಂಡರನ್ನು ಇಂದು ಕೋರ್ಟ್ ಶರತ್ತು ಬದ್ದ ಜಾಮೀನು ನೀಡಿ ಬಿಡುಗಡೆ ಮಾಡಿದೆ. ರಿಲೀಸ್​ಗೂ ಮುಂಚೆ ಎಲ್ಲರನ್ನು ಹಜ್ ಭವನದಲ್ಲಿ ಇರಿಸಲಾಗಿತ್ತು. ಇಂದು ಜಾಮೀನು ದೊರೆತ ಹಿನ್ನಲೆ ಎಲ್ಲರು ಪಾದರಾಯನಪುರಕ್ಕೆ ಎಂಟ್ರಿ ಕೊಟ್ಟಾಗ ಶಾಸಕ ಜಮೀರ್ ಆತ್ಮೀಯ ಸ್ವಾಗತ ನೀಡಿ ಎಲ್ಲರನ್ನು ಪಾದರಾಯನಪುರಕ್ಕೆ ಸ್ವಾಗತ ಮಾಡಿದರು.

ಇನ್ನು ಜನರಿಗೆ ತಿದ್ದಿ ಬುದ್ದಿ ಹೇಳಬೇಕಾದ ಜನ ನಾಯಕರೇ ಇಂತಹ ಪುಂಡರಿಗೆ ಅದ್ದೂರಿ ಸ್ವಾಗತ ಕೋರಿದರೆ, ಮುಂದಿನ ದಿನಗಳಲ್ಲಿ ಇಂತಹ ಪುಂಡರು ಮತ್ತಷ್ಟು ಅನಾಹುತ ಮಾಡುವ ಸಾಧ್ಯತೆಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಜಮೀರ್ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನುವುದೇ ಕಾಡುತ್ತಿರುವ ಪ್ರಶ್ನೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments