ಕಿಂಗ್ಸ್ಟನ್ : ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 257ರನ್ಗಳ ಗೆಲುವು ಸಾಧಿಸುವುದರೊಂದಿಗೆ ಟೆಸ್ಟ್ ಸರಣಿಯನ್ನೂ ತನ್ನದಾಗಿಸಿಕೊಂಡಿತು. ಕೆರಬಿಯನ್ನರನ್ನು ಎರಡೂ ಟೆಸ್ಟ್ನಲ್ಲಿ ಸೋಲಿಸಿದ ವಿರಾಟ್ ಕೊಹ್ಲಿ ಪಡೆ ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ನಲ್ಲಿ ನಂಬರ್ 1 ಸ್ಥಾನದಲ್ಲಿದೆ.
ಭಾರತ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ ವಿಂಡೀಸ್ಗೆ ಒಟ್ಟು 463ರನ್ಗಳ ಗುರಿ ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳ್ಕೊಂಡು 45ರನ್ಗಳಿಸಿತ್ತು. 4ನೇ ದಿನದ ಆಟದಲ್ಲಿಯೂ ವಿಂಡೀಸ್ ಬ್ಯಾಟ್ಸ್ಮನ್ಗಳ ವೈಪಲ್ಯ ಮುಂದುವರೆಯಿತು. ವಿರಾಟ್ ಪಡೆಯ ದಾಳಿಗೆ ಕೆರಬಿಯನ್ನರು ನಡುಗಿ ಹೋದ್ರು. ಕೇವಲ 210ರನ್ ಮಾಡುವಷ್ಟರಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ವಿಂಡೀಸ್ ಭಾರತದ ಎದರು ಮಂಡಿಯೂರಿತು.
ಟಿ20, ಒಡಿಐನಲ್ಲೂ ಸೋಲುಂಡಿದ್ದ ಅತಿಥೇಯ ವೆಸ್ಟ್ ಇಂಡೀಸ್ ಟೆಸ್ಟ್ನಲ್ಲೂ ತಲೆಬಾಗಿತು.
ವಿಂಡೀಸ್ ವಿರುದ್ಧ ಸರಣಿ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ನಲ್ಲಿ ನಂಬರ್ 1..!
RELATED ARTICLES
Recent Comments
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


