Home ರಾಜ್ಯ ‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ. 

ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ ಈ ರೀತಿಯ ತೀರ್ಮಾನ ತೆಗೆದುಕೊಳ್ಳಲಾಗಿದೆ.  ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ವರ್ತಕರ ಒಕ್ಕೊರಲಿನ ಅಭಿಪ್ರಾಯವಾಗಿದ್ದು, ಬಿಗಿಯಾದ ಕ್ರಮ ತೆಗೆದುಕೊಳ್ಳಲು ಜಿಲ್ಲಾರಕ್ಷಣಾಧಿಕಾರಿಗಳು ತೀರ್ಮಾನಿಸಿದ್ದಾರೆ.  ಇದರನ್ವಯ ಶಿವಮೊಗ್ಗ ನಗರದಲ್ಲಿ 31 ಚೆಕ್ ಪೋಸ್ಟ್ ಗಳು ಮತ್ತು ಇಡೀ ಜಿಲ್ಲೆಯಲ್ಲಿ 76 ಚೆಕ್ ಪೋಸ್ಟ್ ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ.  ಅದರಂತೆ, ಔಷಧಿ ತೆರೆಯಲು ಕೂಡ ವಾಹನ ಬಳಸುವಂತಿಲ್ಲವಾಗಿದ್ದು, ಅದಕ್ಕೂ ನಡೆದುಕೊಂಡು ಹೋಗಿಯೇ, ಔಷಧಿ ತರಬೇಕಿದೆ.  ಯಾವುದೇ ಕಾರಣಕ್ಕೂ ವಾಹನಗಳನ್ನು ಬಳಸುವಂತಿಲ್ಲ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.  ಅಕಸ್ಮಾತ್ ಯಾರಾದರೂ, ದ್ವಿಚಕ್ರ ವಾಹನ ಮತ್ತು ಆಟೋಗಳನ್ನು ತಂದರೆ, ಅವುಗಳನ್ನು ಸೀಜ್ ಮಾಡಲು ತೀರ್ಮಾನಿಸಲಾಗಿದ್ದು, ಮುಂದಿನ 14 ದಿನಗಳ ಕಾಲ ವಾಹನ ಮತ್ತು ಆಟೋಗಳನ್ನು ವಾಪಾಸ್ ನೀಡದೇ, ಅವುಗಳನ್ನು ನ್ಯಾಯಾಲಯದ ಮೂಲಕವೇ ಬಿಡಿಸಿಕೊಳ್ಳಬೇಕಿದೆ.  ಪ್ರತಿ ವಾರ್ಡ್ ಗಳಿಗೆ ಹಾಪ್ ಕಾಮ್ಸ್ ಮೂಲಕವೇ ಮನೆ ಬಳಿಯೇ ತರಕಾರಿ ಬರಲಿದ್ದು, ಮತ್ತು ಮನೆ ಬಳಿಯೇ ಇರುವ ಅಂಗಡಿಗಳಲ್ಲಿ ದಿನಸಿ ಅಥವಾ ತರಕಾರಿ ಖರೀದಿ ಮಾಡಬೇಕಾಗಿದೆ.

ನಾಳೆಯಿಂದ ಎಪಿಎಂಸಿ ಬಳಿ ತರಕಾರಿ ಮಾರಾಟ ನಿಷೇಧ :-

ಅಂದಹಾಗೆ ನಾಳೆಯ ಕಟ್ಟುನಿಟ್ಟಿನ ಲಾಕ್ ಡೌನ್ ಸಂದರ್ಭದಲ್ಲಿ, ಎಪಿಎಂಸಿ ಬಳಿ ತರಕಾರಿ ಮಾರಾಟ ನಿಷೇಧ ಮಾಡಲಾಗಿದೆ.  ಆದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ ಕೇವಲ ಹೋಲ್ ಸೇಲ್ ಗೆ ವ್ಯಾಪಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಎಪಿಎಂಸಿ ಹೊರಭಾಗದಲ್ಲಿ ಯಾವುದೇ ತರಕಾರಿ ಮಾರಾಟಕ್ಕೆ ಅವಕಾಶ ನಿರಾಕರಿಸಲಾಗಿದೆ.  ಯಾರಾದರೂ ತರಕಾರಿ ಮಾರಾಟಕ್ಕೆ ಮುಂದಾದರೆ, ಪೊಲೀಸರು ಬಿಗಿ ಕ್ರಮ ತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೃಷಿ ಚಟುವಟಿಕೆಗೆ ಅವಕಾಶ :-

ಅಂದಹಾಗೆ, ಗ್ರಾಮಾಂತರ ಪ್ರದೇಶದಲ್ಲಿಯೂ ಬಿಗಿ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದ್ದು, ಗ್ರಾಮೀಣ ಪ್ರದೇಶದ ಜನರು ಕೂಡ ಮನೆ ಬಿಟ್ಟು ಹೊರಬರುವಂತಿಲ್ಲ.  ಆದರೆ, ಗ್ರಾಮಸ್ಥರಿಗೆ ಕೃಷಿ ಚಟುವಟಿಕೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ.

ಲಾಕ್ ಡೌನ್ ಬಗ್ಗೆ ಎಸ್.ಪಿ. ಎಚ್ಚರಿಕೆ ಏನು…? :-ನಾಳೆ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ ಎಂದು ಎಸ್.ಪಿ. ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.  ಯಾವುದೇ ವಾಹನಗಳನ್ನು ನಾವು ಸಂಚರಿಸಲು ಬಿಡುವುದಿಲ್ಲ ಎಂದು ಎಸ್.ಪಿ. ಖಡಕ್ ಎಚ್ಚರಿಕೆ ನೀಡಿದ್ದಾರೆ.  ಅಲ್ಲದೇ, ಈಗಾಗಲೇ, ಹಲವಾರು ಅಂಗಡಿಗಳ ಮೇಲೆ ಎಫ್.ಐ.ಆರ್. ಪ್ರಕರಣ ದಾಖಲಿಸಲಾಗಿದ್ದು, ಇನ್ನು ಮುಂದೆಯೂ ಯಾರಾದರೂ ವರ್ತಕರು ತಮ್ಮ ಅಂಗಡಿಗಳನ್ನು ತೆರೆದರೆ, ಅಂತಹವರ ಮೇಲೆ ಕೇಸು ದಾಖಲಿಸಲಾಗುವುದಲ್ಲದೇ, ಅಂತಹ ಅಂಗಡಿ ಮಾಲೀಕರನ್ನು ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.  ಅಲ್ಲದೇ, ದ್ವಿಚಕ್ರ ವಾಹನವಲ್ಲದೇ, ಯಾವುದಾದರೂ ವಾಹನಗಳಿಗೆ ಪಾಸ್ ಇಲ್ಲದೇ, ಸಂಚರಿಸದರೆ, ಅಂತಹ ವಾಹನಗಳನ್ನು ಸೀಜ್ ಮಾಡುತ್ತೆವೆ.  ಅನಾವಶ್ಯಕವಾಗಿ ವಾಹನ ಸಂಚರಿಸುವುದು ತಿಳಿದು ಬಂದರೆ ಅಂತಹ ವಾಹನಗಳ ಮೇಲೆ ಎಫ್.ಐ.ಆರ್. ದಾಖಲಿಸುತ್ತೆವೆ ಎಂದು ಎಸ್.ಪಿ. ಸಾರ್ವಜನಿಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments