Home ರಾಜ್ಯ ಖರ್ಗೆಗೆ ಮುಖ್ಯಮಂತ್ರಿ ಹುದ್ದೆ ಆಫರ್ ನೀಡಿದ ದೊಡ್ಡಗೌಡ್ರು!

ಖರ್ಗೆಗೆ ಮುಖ್ಯಮಂತ್ರಿ ಹುದ್ದೆ ಆಫರ್ ನೀಡಿದ ದೊಡ್ಡಗೌಡ್ರು!

ಬೆಂಗಳೂರು : ಮೈತ್ರಿ ಸರ್ಕಾರ ಪತನವಾಗದಂತೆ ಉಳಿಸಿಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್​ ನಾಯಕರು ಮತ್ತೊಂದು ರಣತಂತ್ರ ಮಾಡಿದ್ದಾರೆ .

ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್ .ಡಿ.ದೇವೇಗೌಡರು ಹೊಸ ದಾಳವನ್ನ ಉರುಳಿಸಿದ್ದಾರೆ. ಬದಲಾದ ರಾಜಕೀಯದ ಪರಿಸ್ಥಿತಿಯಲ್ಲಿ ಖರ್ಗೆಯವರನ್ನ ಸಿಎಂ ಮಾಡೋಣ ಎಂದಿದ್ದಾರೆ ದೇವೇಗೌಡರು. ಸಿದ್ದರಾಮಯ್ಯ ನಡೆಗೆ ಆಕ್ರೋಶಗೊಂಡಿರುವ ಗೌಡ್ರು,  ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಹುದ್ದೆ ಆಫರ್​ ನೀಡಿದ್ದಾರೆ. ದೇವೇಗೌಡರು ಈ ಹಿಂದೆಯೇ ಖರ್ಗೆ ಸಿಎಂ ಆಗಲಿ ಎಂದು ಹೇಳಿದ್ದರು. ಡಿಕೆಶಿ ಎದುರಲ್ಲೇ ಖರ್ಗೆಗೆ ದೂರವಾಣಿ ಕರೆ ಮಾಡಿದ್ರು. ಆದರೆ, ಈ ಕುರಿತು  ಖರ್ಗೆ ಸ್ಪಷ್ಟವಾಗಿ ಏನನ್ನೂ  ಹೇಳಿರಲಿಲ್ಲ. ದೊಡ್ಡಗೌಡರ ಆಫರ್ ನಂತರ ಖರ್ಗೆ ಚುರುಕಾಗಿದ್ದು,ಈಗಾಗಲೇ ಪಕ್ಷದ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ  ನಡೆಸಿದ್ದಾರೆ ಎನ್ನಲಾಗುತ್ತಿದೆ.  

LEAVE A REPLY

Please enter your comment!
Please enter your name here

- Advertisment -

Most Popular

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

Recent Comments