Home ರಾಜ್ಯ ‘ಮುಂಡರಗಿಯಲ್ಲಿ ಬೆಲೆ ಏರಿಕೆ ವಿರುದ್ಧ ಮಹಿಳಾ‌ ಕಾಂಗ್ರೆಸ್ ಮಣಿಗಳ ಆಕ್ರೋಶ’

‘ಮುಂಡರಗಿಯಲ್ಲಿ ಬೆಲೆ ಏರಿಕೆ ವಿರುದ್ಧ ಮಹಿಳಾ‌ ಕಾಂಗ್ರೆಸ್ ಮಣಿಗಳ ಆಕ್ರೋಶ’

ಗದಗ: ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಬೆಲೆ ಏರಿಕೆ, ನೂತನ ಕೃಷಿ ಕಾಯ್ದೆ ಖಂಡಿಸಿ ಹಾಗೂ ಏತನೀರಾವರಿ ಆರಂಭಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ಮಹಿಳೆಯರು ಹಾಗೂ ಪುರುಷರು ಟ್ರ್ಯಾಕ್ಟರ್ ಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ಅಣಕು ಪ್ರದರ್ಶನ ಮಾಡಿದರು.

ಈ ವೇಳೆ ತಾಲೂಕಿನ ಜಾಲವಾಡಗಿ ಏತನೀರಾವರಿ ಕಾಮಗಾರಿ ಪ್ರಾರಂಭಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ದೆಹಲಿ ರೈತರ ಹೋರಾಟದ ಬೆಂಬಲಾರ್ಥವಾಗಿ ಗದಗ ಜಿಲ್ಲೆಯಲ್ಲೂ ಹೋರಾಟ ಮಾಡಿದರು. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಹೋರಾಟಗಾರ ವೈ.ಎನ್ ಗೌಡರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮು ಕಲಾಲ್ ಸೇರಿದಂತೆ ಅನೇಕ ಮುಖಂಡರ ನೇತೃತ್ವದಲ್ಲಿ ಹೋರಾಟ ನಡೆಯಿತು. ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನದಿಂದ ತಹಶಿಲ್ದಾರ ಕಚೇರಿ ವರೆಗೆ ಪ್ರಮುಖ ಬೀದಿಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.

ಈ ವೇಳೆ ಅನೇಕ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ರೈತ ವಿರೋಧಿ ಕೃಷಿ ಕಾನೂನು ಹಿಂಪಡೆಯಬೇಕು. ಬೆಲೆ ಏರಿಕೆ ಕೂಡಲೇ ಇಳಿಕೆಯಾಗಬೇಕು ಅಂತ ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಯುವ ಘಟಕ ಕಾರ್ಯಕರ್ತರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

– ಮಹಲಿಂಗೇಶ್ ಹಿರೇಮಠ. ಗದಗ

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments