Home ಕ್ರೀಡೆ P.Cricket ವರ್ಲ್ಡ್​​ಕಪ್​​ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಚೊಚ್ಚಲ ಶತಕ..!

ವರ್ಲ್ಡ್​​ಕಪ್​​ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಚೊಚ್ಚಲ ಶತಕ..!

ಟೀಮ್​ ಇಂಡಿಯಾದ ಯುವತಾರೆ… ಯಾವ ಕ್ರಮಾಂಕದಲ್ಲೂ ಕೂಡ ಬ್ಯಾಟ್​ ಬೀಸಬಲ್ಲ ಕನ್ನಡಿಗ ಕೆ.ಎಲ್ ರಾಹುಲ್ ವಿಶ್ವಕಪ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಹೆಡಿಂಗ್ಲೆಯ ಲೀಡ್ಸ್​ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ವಿಶ್ವಕಪ್ ಲೀಗ್ ಮ್ಯಾಚ್​ನಲ್ಲಿ ರಾಹುಲ್ ಶತಕಗಳಿಸಿದ್ದಾರೆ. ಶ್ರೀಲಂಕಾ ನೀಡಿದ 265ರನ್​ಗಳ ಗುರಿಯನ್ನು ಭಾರತ ಯಶಸ್ವಿಯಾಗಿ ಬೆನ್ನತ್ತಿದೆ.

ಉಪ ನಾಯಕ ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆಡರಂಭಿಸಿದ ರಾಹುಲ್ ಲಂಕನ್ನರಿಗೆ ಸಿಂಹ ಸ್ವಪ್ನವಾಗಿ ಕಾಡಿದ್ರು. 118 ಬಾಲ್​ಗಳಲ್ಲಿ 11 ಬೌಂಡರಿ, 1 ಸಿಕ್ಸರ್ ಸಹಿತ 111ರನ್​ ಮಾಡಿದ್ರು. ಭಾರತದ ಗೆಲುವಿಗೆ ಕೇವಲ 21ರನ್​ ಬೇಕಾದಾಗ ರಾಹುಲ್ ಲಸಿತ್ ಮಲಿಂಗಾಗೆ ವಿಕೆಟ್ ಒಪ್ಪಿಸಿದ್ರು. ರಾಹುಲ್ ಅವರ ಒಡಿಐನ 2ನೇ ಹಾಗೂ ವಿಶ್ವಕಪ್​ನ ಚೊಚ್ಚಲ ಶತಕ ಇದಾಗಿದೆ. 
ಇನ್ನು 265ರನ್​ಗಳ ಗುರಿ ಬೆನ್ನತ್ತಿದ್ದ ಭಾರತಕ್ಕೆ ರೋಹಿತ್ ಶರ್ಮಾ ಹಾಗೂ ರಾಹುಲ್ ಉತ್ತಮ ಆರಂಭ ಒದಗಿಸಿದ್ರು. ಈ ಜೋಡಿ 189ರನ್​ ಗಳ ಜೊತೆಯಾಟವಾಡಿತು. ರೋಹಿತ್ ಕೂಡ 103ರನ್ ಗಳಿಸಿದ್ರು. ಜೊತೆಗೆ ಈ ಸೆಂಚುರಿಯೊಂದಿಗೆ ಅವರು ಒಂದೇ ವಿಶ್ವಕಪ್​ನಲ್ಲಿ 5 ಶತಕ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್​​ಮನ್ ಎಂಬ ದಾಖಲೆಯನ್ನೂ ಬರೆದ್ರು.

ರೋಹಿತ್, ರಾಹುಲ್ ಶತಕ ವೈಭವ ; ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವರ್ಲ್ಡ್​​ಕಪ್ ಇತಿಹಾಸದಲ್ಲೇ ಯಾರೂ ಮಾಡದ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ..!

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments