Home ಕ್ರೀಡೆ P.Cricket ಸೆಮಿಫೈನಲ್​ಗೆ ಕಾಲಿಟ್ಟ ವಿಶ್ವಸಮರ! ಎಲ್ಲಿ ಯಾರ ವಿರುದ್ಧ ಪಂದ್ಯ,ಇಲ್ಲಿದೆ ಡಿಟೇಲ್ಸ್..

ಸೆಮಿಫೈನಲ್​ಗೆ ಕಾಲಿಟ್ಟ ವಿಶ್ವಸಮರ! ಎಲ್ಲಿ ಯಾರ ವಿರುದ್ಧ ಪಂದ್ಯ,ಇಲ್ಲಿದೆ ಡಿಟೇಲ್ಸ್..

ಕ್ರಿಕೆಟ್​ನ ಮಹಾಕದನ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳು ಶನಿವಾರ ಮುಕ್ತಾಯಗೊಂಡಿದ್ದು, ಇದೀಗ ಟೂರ್ನಿಯ ಸೆಮಿಫೈನಲ್ ಹಂತಕ್ಕೆ ಕಾಲಿಟ್ಟಿದೆ.

ಟೂರ್ನಿಯಲ್ಲಿ ಆಸ್ಟ್ರೇಲಿಯಾ, ಭಾರತ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿತ್ತಾದರೂ ಕೂಡ ಅಂತಿಮ ನಾಲ್ಕರ ಘಟ್ಟದಲ್ಲಿ ಯಾವ ತಂಡಗಳು ಸ್ಪರ್ಧಿಸುತ್ತವೆ ಎಂಬುದು ಸ್ಪಷ್ಟವಾಗಿರಲಿಲ್ಲ. ಇದಕ್ಕಾಗಿ ಲೀಗ್ ಹಂತದ ಅಂತಿಮ ಹಣಾಹಣಿಯ ಫಲಿಂತಾಶಕ್ಕಾಗಿ ಕಾದು ಕುಳಿತುಕೊಳ್ಳುವಂತಾಗಿತ್ತು.

ಶನಿವಾರ ನಡೆದ  ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡ ಶ್ರೀಲಂಕಾ ತಂಡವನ್ನು ಮಣಿಸುವುದರೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದರೆ, ಮೊದಲ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ತಂಡವೂ ತನ್ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಶರಣಾಗುವ ಮೂಲಕ ದ್ವಿತೀಯ ಸ್ಥಾನಕ್ಕೆ ಜಾರಿತು.

   ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ 4ನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಈ ಪಂದ್ಯ ಜುಲೈ 09ರಂದು ಮ್ಯಾಂಚೆಸ್ಟರ್ನಲ್ಲಿ ನಡೆಯಲಿದೆ. ಇನ್ನು ಇತ್ತಂಡಗಳು ಈ ವಿಶ್ವಸಮರದಲ್ಲಿ ಸೆಣಸಾಡುತ್ತಿರುವುದು ಇದೇ ಮೊದಲ ಬಾರಿ. ಲೀಗ್ ಹಂತದಲ್ಲಿ ನಡೆಯಬೇಕಿದ್ದ ಪಂದ್ಯ ಮಳೆಗೆ ಆಹುತಿಯಾದುದ್ದರಿಂದ ಎರಡೂ ತಂಡಗಳು ಅಂಕವನ್ನು ಸಮನಾಗಿ ಹಂಚಿಕೊಂಡಿದ್ದವು.

ಇನ್ನು ಎರಡನೇ ಸೆಮಿಫೈನಲ್ ಕದನದಲ್ಲಿ ಅಂಕಪಟ್ಟಿಯ ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ತೃತೀಯ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡಗಳು ಜುಲೈ 11ರಂದು ಎಡ್ಜ್ಬಾಸ್ಟನ್ ಮೈದಾನದಲ್ಲಿ ಪೈಪೋಟಿ ನಡೆಸಲಿವೆ. ಉಭಯ ತಂಡಗಳ ಲೀಗ್ ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡನ್ನು ಬಗ್ಗುಬಡಿದಿತ್ತು. ಜುಲೈ 14ರಂದು ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments