Home ರಾಜ್ಯ ಸೈನಿಕರ ವಿಚಾರ ಚುನಾವಣೆಗೆ ಬಳಸೋ ಪ್ರಶ್ನೆಯೇ ಇಲ್ಲ: ಬಿಎಸ್​​ವೈ

ಸೈನಿಕರ ವಿಚಾರ ಚುನಾವಣೆಗೆ ಬಳಸೋ ಪ್ರಶ್ನೆಯೇ ಇಲ್ಲ: ಬಿಎಸ್​​ವೈ

ಬೆಂಗಳೂರು: ಸೈನಿಕರ ವಿಚಾರವನ್ನು ಚುನಾವಣಾ ವಿಚಾರದಲ್ಲಿ ಬಳಸೋ ಪ್ರಶ್ನೆಯೇ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸರ್ಜಿಕಲ್​ ಸ್ಟ್ರೈಕ್​ನಿಂದ 22ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಯಡಿಯೂರಪ್ಪ ಅವರು ನೀಡಿದ್ದ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿ, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಅಂತ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. “ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಪ್ರಪಂಚದಾದ್ಯಂತ ಪಾಕಿಸ್ತಾನ ನಡುವಳಿಕೆ ಖಂಡನೆ ವ್ಯಕ್ತವಾಗುತ್ತಿದೆ. ಅಭಿನಂದನ್ ಅವರನ್ನು ಭಾರತಕ್ಕೆ ಕರೆತರುವ ವಿಶ್ವಾಸವಿದೆ. ಸೆರೆಸಿಕ್ಕ ಯೋಧರನ್ನು ಹಿಂಸಿಸಲು ಅವಕಾಶವಿಲ್ಲ” ಅಂತ ಹೇಳಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್​ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ಮಾಡಿರುವ ದಾಳಿ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಹಯ ಮಾಡುತ್ತೆ. ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳಲ್ಲಿ ಗೆಲ್ಲಲು ಸಹಾಯ ಮಾಡುತ್ತದೆ ಅಂತ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments